ಸಾಹಿತ್ಯ ಕ್ಷೇತ್ರಕ್ಕೆ ದೊಡ್ಡ ನಷ್ಟ :ಶಶೀಲ್ ಜಿ ನಮೋಶಿ

ಕಲಬುರ್ಗಿ:ಸೆ.25: ಕನ್ನಡದ ಸುಪ್ರಸಿದ್ಧ ಕಾದಂಬರಿಕಾರರು, ಪದ್ಮಭೂಷಣ ಪುರಸ್ಕøತ, ಸರಸ್ವತಿ ಸಮ್ಮಾನ್ ಡಾ. ಎಸ್.ಎಲ್.ಭೈರಪ್ಪ ಅವರ ನಿಧನಕ್ಕೆ ವಿಧಾನ ಪರಿಷತ್ ಸದಸ್ಯರು ಹಾಗೂ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಆಗಿರುವ ಬಸವರಾಜ ಶಶೀಲ್ ಜಿ ನಮೋಶಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತಮ್ಮ ಶೋಕ ಸಂದೇಶದಲ್ಲಿ ಅವರು, ಭೈರಪ್ಪನವರು ಕೊನೆಯ ದಿನಗಳವರೆಗೂ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದ ಕನ್ನಡದ ಕ್ರೀಯಾಶೀಲ ಸಾಹಿತಿಯಾಗಿದ್ದ ಭೈರಪ್ಪನವರು ಬರೆದ ವಂಶವೃಕ್ಷ, ಗೃಹಭಂಗ, ಆವರಣ, ನಾಯಿ ನೆರಳು, ಸಾಕ್ಷಿ, ಅನ್ವೇಷಣೆ ಸೇರಿದಂತೆ ಸುಮಾರು 21 ಕೃತಿಗಳು ಹಾಗೂ ಹಲವಾರು ಕಾದಂಬರಿಗಳು ಇಂದಿಗೂ ಜನಪ್ರಿಯವಾಗಿದ್ದು, ಯುವ ಸಮುದಾಯದಲ್ಲಿ ರಾಷ್ಟ್ರೀಯ ಪ್ರಜ್ಞೆಯನ್ನು ಜಾಗೃತಗೊಳಿಸುತ್ತಿರುವುದು ಅವರ ಅಪಾರ ಜ್ಞಾನ ಬಂಢಾರ ಹಾಗೂ ಬರವಣೆಗೆ ಶೈಲಿಯನ್ನು ಎತ್ತಿತೋರಿಸುತ್ತಿದೆ ಎಂದು ಬಣ್ಣಿಸಿದ್ದಾರೆ. ಇವರ ನಿಧನದೊಂದಿಗೆ ಕನ್ನಡ ಸಾರಸತ್ವ ಲೋಕ ಅಪೂರ್ವ ಸಾಹಿತಿಯನ್ನು ಕಳದೆಕೊಂಡಂತಾದ್ದು, ಇಡೀ ಕನ್ನಡ ನಾಡಿಗೆ ಭರಿಸಲಾರದ ನಷ್ಟ ಉಂಟಾಗಿದೆ ಎಂದು ಕಂಬನಿ ಮಿಡಿದಿದ್ದಾರೆ ಭಗವಂತ ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಅವರ ಕುಟುಂಬ ವರ್ಗ, ಶಿಷ್ಯ ವರ್ಗ ಹಾಗೂ ಓದುಗ ಬಂಧುಗಳಲ್ಲಿ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಶಶೀಲ್ ಜಿ ನಮೋಶಿ ತಿಳಿಸಿದ್ದಾರೆ.