ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿ ನೇಣಿಗೆ ಶರಣು

ಕಲಬುರಗಿ,ಅ.21-ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಡಬರಾಬಾದ ಕ್ರಾಸ್ ಹತ್ತಿರದ ಲಕ್ಷ್ಮೀ ನಗರದಲ್ಲಿ ನಡೆದಿದೆ.
ಪ್ರಭು ಹಳ್ಳಿ ಆತ್ಮಹತ್ಯೆ ಮಾಡಿಕೊಂಡವರು.
ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಪ್ರಭು ಹಳ್ಳಿ ಅವರು ಕುಡಿತದ ಚಟಕ್ಕೆ ಅಂಟಿಕೊಂಡಿದ್ದರು. ಪತ್ನಿ ಜೊತೆಗೆ ಜಗಳವಾಡಿದ್ದರಿಂದ ಅವರು ಮಕ್ಕಳನ್ನು ಕರೆದುಕೊಂಡು ಹತ್ತಿರದಲ್ಲಿರುವ ಸಂಬಂಧಿಕರ ಮನೆಗೆ ಹೋಗಿದ್ದರು. ಈ ವೇಳೆ ಪ್ರಭು ಅವರು ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂಬಂಧ ಅವರ ಪತ್ನಿ ಶಶಿಕಲಾ ಹಳ್ಳಿ ಅವರು ಸಬ್-ಅರ್ಬನ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.