Home ಕ್ರೈಂ ಸುದ್ದಿಗಳು ಕಲಹಳ್ಳಿ ಅರಣ್ಯದಲ್ಲಿ ವ್ಯಕ್ತಿಯ ಕೊಳೆತ ಶವ ಪತ್ತೆ – ಕೊಲೆ ಶಂಕೆ

ಕಲಹಳ್ಳಿ ಅರಣ್ಯದಲ್ಲಿ ವ್ಯಕ್ತಿಯ ಕೊಳೆತ ಶವ ಪತ್ತೆ – ಕೊಲೆ ಶಂಕೆ

ಜಮಖಂಡಿ ಮಾ.29:ಜಮಖಂಡಿ ತಾಲ್ಲೂಕಿನ ಕಲಹಳ್ಳಿ ಗ್ರಾಮದ ಸಿದ್ದಾಪುರ ರಸ್ತೆಯ ಅರಣ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬರ ಕೊಳೆತ ಸ್ಥಿತಿಯ ಶವ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.
ಮೃತ ವ್ಯಕ್ತಿಯನ್ನು ರಬಕವಿ-ಬನಹಟ್ಟಿ ತಾಲೂಕಿನ ನಾವಲಗಿ ಗ್ರಾಮದ ಈರಪ್ಪಾ ಅಲ್ಲಪ್ಪಾ ಇಕ್ಕಡಿ (ವಯಸ್ಸು 40) ಎಂದು ಗುರುತಿಸಲಾಗಿದೆ.
ಸ್ಥಳೀಯರು ಗಮನಿಸಿ ಪೆÇಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ತಕ್ಷಣವೇ ಪೆÇಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಘಟನಾ ಸ್ಥಳಕ್ಕೆ ಸಿಪಿಐ ಮಲ್ಲಪ್ಪ ಮಡ್ಡಿ ಹಾಗೂ ಪಿಎಸ್‍ಐ ಗಂಗಾಧರ ಪೂಜೆರಿ ಅವರ ನೇತೃತ್ವದ ಪೆÇಲೀಸ್ ತಂಡ ಭೇಟಿ ನೀಡಿ ಶವವನ್ನು ಪರಿಶೀಲಿಸಿ, ಮರಣೋತ್ತರ ಪರೀಕ್ಷೆಗಾಗಿ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಸಂಬಂಧ ಜಮಖಂಡಿ ಗ್ರಾಮೀಣ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಈ ವೇಳೆ ಅರಣ್ಯ ಗಸ್ತು ಪಾಲಕ ಈರಣ್ಣ ಪೆÇದ್ದಾರ ಹಾಗೂ ಪೆÇಲೀಸ್ ಸಿಬ್ಬಂದಿಗಳಾದ ಆದಿನಾಥ ಸದಲಗಿ, ಸಿದ್ದು ಸನಗೌಡರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.