
ಸೂಲಹಳ್ಳಿ: ಗ್ರಾಮದ ಆರಾಧ್ಯ ದೈವ ಶ್ರೀ ಬಲಭೀಮ ದೇವಸ್ಥಾನದ ಪಲ್ಲಕ್ಕಿ ಉತ್ಸವವು ಶನಿವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಜರುಗಿತು. ಉತ್ಸವದ ಅಂಗವಾಗಿ ನಡೆದ ಪಲ್ಲಕ್ಕಿ ಮೆರವಣಿಗೆಯಲ್ಲಿ ಸುತ್ತಮುತ್ತಲಿನ ಗ್ರಾಮಗಳ ಸೇರಿದಂತೆ ಸಾವಿರಾರು ಭಕ್ತರು ಪಾಲ್ಗೊಂಡು ದೇವರ ದರ್ಶನ ಪಡೆದು ಭಕ್ತಿಭಾವ ಮೆರೆದರು.
ದೇವಸ್ಥಾನವನ್ನು ವಿಶೇಷವಾಗಿ ಅಲಂಕರಿಸಲಾಗಿದ್ದು, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಪಲ್ಲಕ್ಕಿ ಉತ್ಸವದ ವೇಳೆ ಭಕ್ತರು ಜಯಘೋಷ ಮೊಳಗಿಸಿ, ಭಜನೆ ಹಾಗೂ ವಿವಿಧ ವಾದ್ಯಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿದರು. ಮಹಿಳೆಯರು, ಮಕ್ಕಳು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಭಕ್ತರು ಉತ್ಸವದಲ್ಲಿ ಭಾಗವಹಿಸಿದ್ದರು.
ಉತ್ಸವದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಭಕ್ತರ ಅನುಕೂಲಕ್ಕಾಗಿ ದೇವಸ್ಥಾನ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಅಗತ್ಯ ವ್ಯವಸ್ಥೆಗಳನ್ನು ಕೈಗೊಂಡಿದ್ದರು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಪೆÇಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.
ಪಲ್ಲಕ್ಕಿ ಉತ್ಸವವು ಸಾಂಪ್ರದಾಯಿಕ ಆಚರಣೆಗಳು ಹಾಗೂ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ನೆರವೇರಿತು. ಉತ್ಸವದಲ್ಲಿ ಪಾಲ್ಗೊಂಡ ಭಕ್ತರು ಶ್ರೀ ಬಲಭೀಮನ ದರ್ಶನ ಪಡೆದು ತಮ್ಮ ಇಷ್ಟಾರ್ಥಗಳು ಈಡೇರಲಿ ಎಂದು ಪ್ರಾರ್ಥಿಸಿದರು. ಶಿವರಾಜಗೌಡ ಮಾಲಿ ಪಾಟೀಲ್
ಸಿದ್ರಾಮಪ ಪೆÇಲೀಸ್ ಪಾಟೀಲ್
ಶರಣಪ್ಪ ಸಿರೂರ್
ಶ್ರೀಮಂತ ಸಾವು ಇಂಗಳಿಗಿ
ದೇವಿಂದ್ರಪ್ಪ ಸಾವು ಇಂಗಳಗಿ
ರವಿ ಗುತ್ತೇದಾರ್
ಭೀಮರಾಯ ಸುಬೇದಾರ್
ವೀರಭದ್ರಯ್ಯ ಸ್ವಾಮಿ
ವೇದಮೂರ್ತಿ ದೊಡ್ಡಯ್ಯ ಸ್ವಾಮಿ
ಶಿವರಾಜ್ ಗೌಡ ಬಿರೇದಾರ
ಬಸವರಾಜ ಹಡಪದ್
ಮಲ್ಲು ಅಲ್ಲೂರ್
ದೇವೇಂದ್ರಪ್ಪ ಪಡಿಶೆಟ್ಟಿ
ರಾಜು ಗುತ್ತೇದಾರ್ಭಾಗವಹಿಸಿದ್ದರು.































