ಕಲಬುರಗಿ:ಜು.03:ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಆಳಂದ ತಾಲೂಕು ನ್ಯಾಯಾಲಯ ಆವರಣದಲ್ಲಿ ಹಮ್ಮಿಕೊಳ್ಳಲಾದ ಜಾಥಾಕ್ಕೆ ಆಳಂದ ಪ್ರಧಾನ ಸಿವಿಲ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಕುಮಾರಿ ಸುಮನ್ ಚಿತ್ರಗಿ ಅವರು ಗುರುವಾರ ಹಸಿರು ನಿಶಾ ತೋರಿಸುವ ಮೂಲಕ ಚಾಲನೆ ನೀಡಿದರು.
ನಂತರ ಅವರು ಮಾತನಾಡಿ, ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ನಿμÉೀದ ಮತ್ತು ನಿಯಂತ್ರಣ ಕಾಯ್ದೆ 2016 ರಡಿ ನೇಮಿಸಿಕೊಂಡ ಮಾಲೀಕರ ಮೇಲೆ ದೂರು ದಾಖಲಿಸಿಕೊಂಡು ದಂಡ ಮತ್ತು ಶಿಕ್ಷೆ ವಿಧಿಸಲಾಗುತ್ತದೆ. ಎಲ್ಲಾದರೂ ದುಡಿಯುವ ಮಕ್ಕಳು ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಮಾಡಿ ತಿಳಿಸಬೇಕು ಎಂದರು.
ಈ ಸಂದರ್ಭದಲ್ಲಿ ಆಳಂದ ಪ್ರಧಾನ ಸಿವಿಲ್ ನ್ಯಾಯಾಲಯದ ಸಹಾಯಕ ಸರ್ಕಾರಿ ಅಭಿಯೋಜಕ ಇಸ್ಮಾಯಿಲ್ ಪಟೇಲ್, ಅಪರ ಸಿವಿಲ್ ನ್ಯಾಯಾಲಯದ ಸಹಾಯಕ ಸರ್ಕಾರಿ ಅಭಿಯೋಜಕ ಜ್ಯೋತಿ ವಿ.ಬಂದಿ, ತಾಲೂಕು ನ್ಯಾಯವಾದಿಗಳ ಸಂಘದ ಅಧ್ಯಕ್ಷ ಕಮಲಾಕರ ವಿ. ರಾಠೋಡ, ಕಾರ್ಯದರ್ಶಿ ಬಲಭೀಮ ಟಿ. ಶಿಂಧೆ, ತಾಲೂಕು ದೈಹಿಕ ಶಿಕ್ಷಣ ಅಧಿಕಾರಿ ಅರವಿಂದ ಭಾಸಗಿ, ಕಲಬುರಗಿ 2ನೇ ವೃತ್ತದ ಹಿರಿಯ ಕಾರ್ಮಿಕ ನಿರೀಕ್ಷಕ ರವೀಂದ್ರಕುಮಾರ ಬಲ್ಲೂರ್, ಸಂಸ್ಕಾರ ಪ್ರತಿಷ್ಠಾನ ಸಂಸ್ಥೆಯ ನಿರ್ದೇಶಕ ವಿಠ್ಠಲ ಚಿಕಣಿ, ಮಕ್ಕಳ ಸಹಾಯವಾಣಿ ಸಿಬ್ಬಂದಿ ದೇವೀಂದ್ರ, ಡಾನ್‍ಬಾಸ್ಕೋ ಸಿಬ್ಬಂದಿ ಶ್ರೀದೇವಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಸಂತೋಷ ಕುಲಕರ್ಣಿ ಸೇರಿದಂತೆ ಯಾಸೀನ್ ಮತ್ತು ಲಕ್ಷ್ಮೀಕಾಂತ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಈ ಕಾರ್ಯಕ್ರಮವನ್ನು ಆಳಂದ ತಾಲೂಕಾಡಳಿತ, ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕಾ ನ್ಯಾಯವಾದಿಗಳ ಸಂಘ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೂಸೈಟಿ, ಮಾರ್ಗದರ್ಶಿ ಸಂಸ್ಥೆ, ಡಾನ್‍ಬಾಸ್ಕೊ ಸಂಸ್ಥೆ ಹಾಗೂ ಮಕ್ಕಳ ಸಹಾಯವಾಣಿ-1098/112 ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಪ್ಯಾನ್ ಇಂಡಿಯಾ ಬಾಲಕಾರ್ಮಿಕ ಮಕ್ಕಳ ರಕ್ಷಣೆ ಮತ್ತು ಪುನರ್ವಸತಿ ಕಾರ್ಯಚರಣೆ ಇವುಗಳ ಸಂಯುಕ್ತಾಶ್ರಯದಲ್ಲ್ಲಿ ಹಮ್ಮಿಕೊಳ್ಳಲಾಯಿತು.