Home ಜಿಲ್ಲೆ ಕಲಬುರಗಿ ಕಲಬುರಗಿ ಕೇಂದ್ರ ಬಸ್ ನಿಲ್ದಾಣದಲ್ಲಿ ಒಳಚರಂಡಿ ಒಡೆದು ಗಬ್ಬು ವಾಸನೆ: ಪ್ರಯಾಣಿಕರ ಆಕ್ರೋಶ

ಕಲಬುರಗಿ ಕೇಂದ್ರ ಬಸ್ ನಿಲ್ದಾಣದಲ್ಲಿ ಒಳಚರಂಡಿ ಒಡೆದು ಗಬ್ಬು ವಾಸನೆ: ಪ್ರಯಾಣಿಕರ ಆಕ್ರೋಶ

ಕಲಬುರಗಿ: ಮೇ.4:ನಗರದ ಕಲಬುರಗಿ ಕೇಂದ್ರ ಬಸ್ ನಿಲ್ದಾಣದಲ್ಲಿ ಒಳಚರಂಡಿ ಒಡೆದು ಕೊಳಚೆ ನೀರು ಹೊರ ಹರಿಯುತ್ತಿರುವ ಪರಿಣಾಮ ಬಸ್ ನಿಲ್ದಾಣದ ಸುತ್ತಮುತ್ತ ಗಬ್ಬು ವಾಸನೆ ಹರಡಿದ್ದು, ಪ್ರಯಾಣಿಕರು ಹಾಗೂ ವ್ಯಾಪಾರಸ್ಥರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಪ್ರತಿದಿನ ಸಾವಿರಾರು ಪ್ರಯಾಣಿಕರು ಸಂಚರಿಸುವ ಈ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ವ್ಯವಸ್ಥೆ ಸಮರ್ಪಕವಾಗಿಲ್ಲ ಎಂಬ ಆರೋಪ ಕೇಳಿಬಂದಿದೆ. ಒಡೆದ ಒಳಚರಂಡಿಯಿಂದ ನೀರು ನಿಂತು ದುರ್ವಾಸನೆ ಹೆಚ್ಚಾಗಿರುವುದಲ್ಲದೆ, ಸೊಳ್ಳೆಗಳ ಕಾಟವೂ ಹೆಚ್ಚುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.
ಸಂಬಂಧಪಟ್ಟ ಹೋಟೆಲ್ ಮಾಲೀಕರು ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಒಳಚರಂಡಿ ದುರಸ್ತಿ ಮಾಡಬೇಕು, ಬಸ್ ನಿಲ್ದಾಣವನ್ನು ಸ್ವಚ್ಛವಾಗಿರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ನಿರ್ಲಕ್ಷ್ಯ ಮುಂದುವರಿದರೆ ಆರೋಗ್ಯ ಸಮಸ್ಯೆಗಳು ಉಲ್ಬಣಿಸುವ ಸಾಧ್ಯತೆ ಇದೆ ಎಂಬ ಆತಂಕವೂ ವ್ಯಕ್ತವಾಗಿದೆ.