
ಬೀದರ:ಫೆ.2: ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ ವಿಕಸಿತ ಭಾರತ ನಿರ್ಮಾಣಕ್ಕೆ ಭದ್ರ ಅಡಿಪಾಯವಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ರೇವಣಸಿದ್ದ ಜಾಡರ್ ಪ್ರತಿಕ್ರಿಯಿಸಿದ್ದಾರೆ.
ಬಜೆಟ್‍ನಲ್ಲಿ ಗ್ರಾಮೀಣ ಅಭಿವೃದ್ಧಿ, ಹೈನುಗಾರಿಕೆ, ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ಕೊಡಲಾಗಿದೆ. ಜಿಲ್ಲೆಗೊಂದು ವಿದ್ಯಾರ್ಥಿ ನಿಲಯ ಸ್ಥಾಪನೆ ಘೋಷಣೆಯು ಮಹಿಳಾ ಶಿಕ್ಷಣಕ್ಕೆ ಉತ್ತೇಜನ ನೀಡಲಿದೆ. ಭವಿಷ್ಯದ ಚಾಂಪಿಯನ್ ಉದ್ಯಮಿಗಳನ್ನು ಬೆಳೆಸಲು ಎಂ.ಎಸ್.ಎಂ.ಇ. ವಲಯಕ್ಕೆ ವಿಶೇಷ ಪ್ಯಾಕೇಜ್, ಮಹಿಳೆಯರ ಆರ್ಥಿಕ ಅಭಿವೃದ್ಧಿಗೆ ಲಕ್‍ಪತಿ ದೀದಿ ಯೋಜನೆ ಘೋಷಿಸಲಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಮಹಿಳಾ ಉದ್ಯಮಿಗಳಿಗೆ ವಿನೂತನ ಶೀ ಮಾರ್ಟ್ ಯೋಜನೆ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅನುದಾನ ಹೆಚ್ಚಳ, ಕ್ಯಾನ್ಸರ್, ಮಧುಮೇಹ ಔಷಧಿಗಳ ಮೇಲಿನ ಸುಂಕ ಕಡಿತದ ಕ್ರಮಗಳು ಸ್ವಾಗತಾರ್ಹವಾಗಿವೆ ಎಂದು ಹೇಳಿದ್ದಾರೆ.

























