
ಸುರಪುರ:ಮಾ.೯: ತಾಲೂಕಿನಾದ್ಯಂತ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಉಂಟಾಗದAತೆ ಅಧಿಕಾರಿಗಳು ಮುಂಜಾಗ್ರತೆ ವಹಿಸುವಂತೆ ಶಾಸಕ ರಾಜಾ ವೇಣುಗೋಪಾಲ ನಾಯಕ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಟ್ಟಣದ ತಹಸಿಲ್ದಾರ್ ಕಚೇರಿ ಸಭಾಂಗಣದಲ್ಲಿ ಬೇಸಿಗೆ ಕುಡಿಯುವ ನೀರಿನ ಕುರಿತು ನಡೆದ ಟಾಸ್ಕ್ ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಈಗಾಗಲೇ ಬೇಸಿಗೆ ಆರಂಭಗೊAಡಿದ್ದು ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಳ್ಳದಂತೆ ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಈಗಿನಿಂದಲೇ ಪರಿಶೀಲನೆ ನಡೆಸಿ ಬೋರ್ವೆಲ್ ಗಳ ದುರಸ್ತಿ, ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿ ಹಾಗೂ ತೀರ ಸಮಸ್ಯೆ ಉಂಟಾಗುವAತಹ ಸ್ಥಳಗಳಿಗೆ ಟ್ಯಾಂಕರ್ ಮೂಲಕವೂ ನೀರು ಸರಬರಾಜು ಮಾಡಲು ಎಲ್ಲ ರೀತಿಯ ಕ್ರಮ ವಹಿಸುವಂತೆ ತಿಳಿಸಿದರು. ಮುಂಚಿತವಾಗಿಯೇ ಗಮನಿಸದೇ ನಂತರ ಏನಾದರೂ ಸಮಸ್ಯೆ ಕಂಡುಬAದಲ್ಲಿ ಅದಕ್ಕೆ ಅಧಿಕಾರಿಗಳೆ ನೇರ ಹೊಣೆಯಾಗಲಿದ್ದೀರಿ ಎಂದು ಎಚ್ಚರಿಕೆ ನೀಡಿದರು. ಬೋರ್ವೆಲ್ ರಿಫ್ರೆಶಿಂಗ್ ಮಾಡಿಸಿ, ನೀರು ಸರಬರಾಜು ಮಾಡುವ ಗುಮ್ಮಿಗಳನ್ನು ಸ್ವಚ್ಛಗೊಳಿಸಿ, ನೀರಿನ ಟ್ಯಾಂಕರ್ ದುರಸ್ತಿ ಅಥವಾ ಬೋರ್ವೆಲ್ ಗಳ ದುರಸ್ತಿ ಇದ್ದಲ್ಲಿ ಈಗಲೇ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಹಣಮಂತ್ರಾಯ ಪಾಟೀಲ ಮಾತನಾಡಿ, ಈಗಾಗಲೇ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಕುರಿತು ಎಲ್ಲ ರೀತಿಯ ಎಚ್ಚರಿಕೆಯನ್ನು ವಹಿಸಲಾಗಿದೆ ತಾಲೂಕಿನಲ್ಲಿ ೨೯ ಗ್ರಾಮಗಳಲ್ಲಿ ಸಮಸ್ಯೆ ಉಂಟಾಗುವ ಸಾಧ್ಯತೆ ಇದ್ದು ಸಮಸ್ಯೆ ಉಂಟಾಗದAತೆ ಮುನ್ನೆಚ್ಚರಿಕೆಯ ಕ್ರಮಕ್ಕೂ ಮುಂದಾಗಿರುವುದಾಗಿ ತಿಳಿಸಿದರು. ಅಲ್ಲದೆ ಬೇಸಿಗೆ ಸಂದರ್ಭದಲ್ಲಿ ನದಿಗೆ ನೀರು ಹರಿಸಲು ಕ್ರಮ ವಹಿಸುವಂತೆ ಶಾಸಕರಿಗೆ ತಿಳಿಸಿದರು. ಇದೇ ಸಂದರ್ಭದಲ್ಲಿ ತಾಲೂಕ ಆರೋಗ್ಯಾಧಿಕಾರಿ ಡಾ. ರಾಜಾ ವೆಂಕಪ್ಪ ನಾಯಕ, ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಪ್ಪ ಕಾಡ್ಲೂರ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಾಮನಗೌಡ ಪಾಟೀಲ, ನಗರ ಕುಡಿಯುವ ನೀರು ಸರಬರಾಜು ಇಲಾಖೆಯ ಸಹಾಯಕ ಅಭಿಯಂತರ ಶಂಕರಗೌಡ, ನಗರಸಭೆ ಪೌರಾಯುಕ್ತ ಬಸವರಾಜ ಟಣಕೆದಾರ, ಕೆಂಭಾವಿ ಪುರಸಭೆಯ ಮುಖ್ಯ ಅಧಿಕಾರಿ ಪ್ರಕಾಶ, ಕಕ್ಕೇರಾ ಪುರಸಭೆಯ ಜೆಇ ರೇಣುಕಮ್ಮ ಬೇಸಿಗೆಯ ನಿರ್ವಹಣೆ ಕುರಿತು ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ಉಪಸ್ಥಿತರಿದ್ದ ತಹಸಿಲ್ದಾರ್ ಹುಸೇನ ಸಾಬ್ ಎ ಸರಕಾವಸ್, ಹುಣಸಗಿ ತಹಸಿಲ್ದಾರ್ ಬಸವರಾಜ, ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಸಜ್ಜನ್ ಮಾತನಾಡಿದರು. ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.




















