Home ಮುಖಪುಟ ಸುದ್ದಿ ಸ್ಟಿಂಗ್ ಆಪರೇಷನ್ ನಡೆಯುತ್ತದೆ ಸಚಿವರೇ ಹುಷಾರ್

ಸ್ಟಿಂಗ್ ಆಪರೇಷನ್ ನಡೆಯುತ್ತದೆ ಸಚಿವರೇ ಹುಷಾರ್

ಬೆಂಗಳೂರು, ಅ. ೭ ರಾಜ್ಯದಲ್ಲಿ ಕೆಲಸವರ ವಿರುದ್ಧ ಕೆಲವರು ರಹಸ್ಯ ಕಾರ್ಯಾಚರಣೆ ನಡೆಸುತ್ತಿರುವ ಸ್ಫೋಟಕ ಮಾಹಿತಿಯನ್ನು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೇ ಬಹಿರಂಗಗೊಳಿಸಿದ್ದಾರೆ ಕೆಲಸಚಿವರನ್ನು ಗುರಿಯಾಗಿಟ್ಟುಕೊಂಡು ಸ್ಟಿಂಗ್ ಆಪರೇಷನ್ ಮಾಡಲಾಗುತ್ತಿದೆ ಸಚಿವರೇ ಹುಷಾರಾಗಿರಿ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೆನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವರನ್ನ ಎಚ್ಚರಿಸಿದ್ದಾರೆ.


ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಸಚಿವರಿಗೆ ಅಚ್ಚರಿಯ ಎಚ್ಚರಿಕೆ ನೀಡಿದ್ದಾರೆ. ತಮ್ಮ ಬಳಿ ಇರುವ ಗುಪ್ತಚರ ಮಾಹಿತಿಯನ್ನು ಬಹಿರಂಗಪಡಿಸಿದ ಮುಖ್ಯಮಂತ್ರಿ , ಪ್ರಸ್ತುತ ಎರಡು ವಿಭಿನ್ನ ತಂಡಗಳಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಖಾಸಗಿ ಸ್ಟಿಂಗ್ ಆಪರೇಷನ್ ಮೂಲಕ ಸಚಿವರ ಚಲನವಲನಗಳ ಮೇಲೆ ನಿಗಾ ಇಡಲಾಗುತ್ತಿದೆ.


ಯಾರೆಲ್ಲಾ ಎಚ್ಚರಿಕೆಯಿಂದ ಇರಬೇಕು ಎಂಬುದನ್ನು ಸಿಎಂ ಪ್ರತ್ಯೇಕವಾಗಿ ಸಚಿವರಿಗೆ ತಿಳಿಸಿದ್ದಾರೆ.- ಗುಪ್ತಚರ ಮೂಲಗಳಿಂದ ಪಡೆದ ಮಾಹಿತಿ ಆಧರಿಸಿ ಮುಖ್ಯಮಂತ್ರಿಗಳು ಸಂಬಂಧಿತ ಸಚಿವರಿಗೆ ಈ ಸುಳಿವು ನೀಡಿದರು

ಸಚಿವ ಸಂಪುಟ ಸಭೆಯಲ್ಲಿ ಸಿಎಂ ಮಾತನಾಡಿ, “ನಿಮ್ಮೆಲ್ಲರ ಚಟುವಟಿಕೆಗಳ ಮೇಲೆ ನಿಗಾ ಇಡಲಾಗುತ್ತಿದೆ. ಯಾರನ್ನೂ ನಂಬಬೇಡಿ, ಜಾಗರೂಕರಾಗಿರಿ. ಖಾಸಗಿ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ” ಎಂದು ಎಚ್ಚರಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸಚಿವರು ಅತ್ಯಂತ ಜಾಗರೂಕತೆಯಿಂದ ವ್ಯವಹರಿಸಬೇಕು ಎಂದು ಸಿಎಂ ಸೂಚಿಸಿದ್ದಾರೆ. ಗುಪ್ತಚರ ಮಾಹಿತಿ ಆಧರಿಸಿ ಸುಳಿವೀಡಿರುವ ಡಿಕೆಶಿ, ಎಲ್ಲಾ ಸಚಿವರು ತಮ್ಮ ಚಲನವಗಳಲ್ಲಿ ಎಚ್ಚರಿಕೆ ವಹಿಸಬೇಕು ಎಂದು ಒತ್ತಿ ಹೇಳಿದ್ದಾರೆ.