ರಾಜ್ಯ ಮಟ್ಟದ ಈಜು ಸ್ಪರ್ಧೆಗೆ ಸಮರ್ಥ ಆಯ್ಕೆ

ಸಂಜೆ ವಾಣಿ ವಾರ್ತೆ
ಜಮಖಂಡಿ:ಅ.೩೦:ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ೨೦೨೫-೨೬ನೇ ಸಾಲಿನ ೧೪ ವರ್ಷ ವಯೋಮಿತಿ ವಿಭಾಗದ ಜಿಲ್ಲಾ ಮಟ್ಟದ ಈಜು ಕ್ರೀಡಾಕೂಟದಲ್ಲಿ ಸ್ಥಳೀಯ ಹುಲ್ಯಾಳದ ತುಂಗಳ್ ಶಾಲೆಯ ಇಂಗ್ಲಿಷ್ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಸಮರ್ಥ ಶಂಕರಾನoದ ಆಸಂಗಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಪ್ರಾಚಾರ್ಯರು ತುಳಿಸಿದ್ದಾರೆ.
೫೦ ಮೀ, ಪ್ರಥಮ ಹಾಗೂ ೧೦೦ ಮೀ ಮತ್ತು ೨೦೦ ಮೀ ಫ್ರೀಸ್ಟೈಲ್ ಈಜು ಸ್ಪರ್ಧೆಗಳಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಅವರು ಈ ಸಾಧನೆ ಮಾಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಶಾಲಾ ಶಿಕ್ಷಣ ಇಲಾಖೆ ಬಾಗಲಕೋಟೆ ಇವರ ಆಶ್ರಯದಲ್ಲಿ ಬಾಗಲಕೋಟೆಯಲ್ಲಿ ಮಂಗಳವಾರ ಜರುಗಿದ ಕ್ರೀಡಾಕೂಟದಲ್ಲಿ ಈ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಯ ಸಾಧನೆಗೆ ವಿದ್ಯಾರ್ಥಿಯ ಸಾಧನೆಗೆ ತುಂಗಳ್ ಶಾಲೆ ಸಂಸ್ಥೆಯ ಆಡಳಿತಾಧಿಕಾರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.