
ಕಲಬುರಗಿ,ಮೇ.24-ನೀಟ್ ಪರೀಕ್ಷೆ ಬರೆದಿದ್ದ ಯುವತಿಯೊಬ್ಬಳು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕೋರ್ಟ್ ವೃತ್ತದ ಬಳಿಯ ಅಪಾರ್ಟ್‍ಮೆಂಟ್‍ನಲ್ಲಿ ನಡೆದಿದೆ.
ಭಾಗ್ಯಶ್ರೀ ರಾಜಶೇಖರ್ (18) ಮೃತ ವಿದ್ಯಾರ್ಥಿನಿಯಾಗಿದ್ದು, ಕಳೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.92 ಅಂಕಗಳನ್ನು ಪಡೆದು ತೇರ್ಗಡೆಯಾಗಿದ್ದರು. ವೈದ್ಯಕೀಯ ಶಿಕ್ಷಣದ ಕನಸು ಕಂಡಿದ್ದ ಭಾಗ್ಯಶ್ರೀ, ಇತ್ತೀಚೆಗೆ ಮೇ.2 ರಂದು ನೀಟ್ ಪರೀಕ್ಷೆ ಬರೆದಿದ್ದರು ಎಂದು ತಿಳಿದುಬಂದಿದೆ.
ಸುದ್ದಿ ತಿಳಿದು ಪೆÇಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಸ್ಟೇಷನ್ ಬಜಾರ್ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.





















