
ಕಲಬುರಗಿ,ಅ.8: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ (ಸಿಯುಕೆ) ಕನ್ನಡ ವಿಭಾಗ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಕರ್ನಾಟಕ ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ಆಯೋಜಿಸಿದ್ದ ‘ಕನ್ನಡ ವಿಮರ್ಶೆಯ ತಾತ್ವೀಕರಣ’ ವಿಷಯದ ಮೂರು ದಿನಗಳ ಕಮ್ಮಟವನ್ನು ಸಿಯುಕೆಯ ಕನ್ನಡ ವಿಭಾಗದ ಸಭಾಂಗಣದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್.ಮುಕುಂದರಾಜ್ ಹಾಗೂ ಸಿಯುಕೆ ಕುಲಪತಿ ಪೆÇ್ರ. ಬಟ್ಟು ಸತ್ಯನಾರಾಯಣ ಅವರು ಉದ್ಘಾಟಿಸಿದರು.
ನಂತರ ಮಾತನಾಡಿದ ಎಲ್.ಎನ್.ಮುಕುಂದರಾಜ್ ಅವರು ಕನ್ನಡ ಸಾಹಿತ್ಯವನ್ನು ಗಂಭೀರವಾಗಿ ಪರಿಗಣಿಸುವುದರ ಜೊತೆಗೆ ಸಾಹಿತಿಗಳು ಮತ್ತು ವಿಮರ್ಶಕರು ತಮ್ಮ ಆತ್ಮವಿಮರ್ಶೆಯೊಂದಿಗೆ ಸಮಾಜದ ಆಗುಹೋಗುಗಳನ್ನೂ ವಿಮರ್ಶಿಸಬೇಕು ಎಂದು ಅವರು ಹೇಳಿದರು.
ಪ್ರಸ್ತುತ ಸಂದರ್ಭದಲ್ಲಿ ಕನ್ನಡ ಸಾಹಿತ್ಯದ ಜೊತೆಗೆ ಸಿನಿಮಾ, ರಂಗಭೂಮಿ, ನಾಟಕ, ಪತ್ರಿಕೋದ್ಯಮ ಸೇರಿದಂತೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿನ ಬೆಳವಣಿಗೆಗಳನ್ನೂ ವಿಮರ್ಶೆಯ ವ್ಯಾಪ್ತಿಗೆ ತರಬೇಕಾಗಿದೆ. ಅನೇಕ ಯುವ ಸಾಹಿತಿಗಳು ತಮ್ಮ ಬರವಣಿಗೆಯ ಮೂಲಕ ಸಮಾಜಮುಖಿ ಕಾರ್ಯ ಮಾಡುತ್ತಿದ್ದಾರೆ. ಅಂತಹ ಬರಹಗಾರರನ್ನು ಪೆÇ್ರೀತ್ಸಾಹಿಸುವ ಅಗತ್ಯವಿದೆ ಎಂದರು.
ಸಂಕಷ್ಟದ ಪರಿಸ್ಥಿತಿಗಳಲ್ಲಿಯೂ ವಿಮರ್ಶಕರು ಮತ್ತು ಸಾಹಿತ್ಯಕಾರರು ಸತ್ಯವನ್ನು ಹೇಳುವ ಧೈರ್ಯ ಹೊಂದಿರಬೇಕು. ಮೌನಕ್ಕೆ ಶರಣಾಗುವುದು ಆತ್ಮಾಹುತಿಗೆ ಸಮಾನ ಎಂದು ಅವರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಸಿಯುಕೆ ಕುಲಪತಿ ಪೆÇ್ರ. ಬಟ್ಟು ಸತ್ಯನಾರಾಯಣ ಅವರು, ಯಾವುದೇ ಭಾಷೆಯನ್ನು ಪ್ರೀತಿಸಬೇಕು ಹಾಗು ಗೌರವಿಸಬೇಕು. ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿ-2020ರ ಆಶಯದಂತೆ ತಮ್ಮ ತಮ್ಮ ಪ್ರಾದೇಶಿಕ ಭಾಷೆಯಲ್ಲಿಯೇ ಶಿಕ್ಷಣವನ್ನು ನೀಡುವುದರಿಂದ ವಿದ್ಯಾರ್ಥಿಗಳು ವಿಷಯಗಳನ್ನು, ವಿಶೇಷವಾಗಿ ಮಾಹಿತಿ ತಂತ್ರಜ್ಞಾನಕ್ಕೆ ಸಂಬಂಧಿಸಿದ ಜ್ಞಾನವನ್ನು ಸುಲಭವಾಗಿ ಗ್ರಹಿಸಲು ಸಾಧ್ಯವಾಗುತ್ತದೆ ಎಂದರು.
ಮುಂದುವರಿದ ಜಪಾನ್, ಜರ್ಮನಿ ಸೇರಿದಂತೆ ಹಲವು ದೇಶಗಳಲ್ಲಿ ತಮ್ಮ ಸ್ಥಳೀಯ ಭಾಷೆಯಲ್ಲಿಯೇ ಶಿಕ್ಷಣ ನೀಡಲಾಗುತ್ತಿದೆ. ನಮ್ಮ ಕನ್ನಡದ ಮಹಾನ್ ಕವಿಗಳಾದ ರನ್ನ, ಪಂಪ, ಪೆÇನ್ನ ಮೊದಲಾದ ಮಹನೀಯರ ಸಾಹಿತ್ಯ ಮತ್ತು ಕೃತಿಗಳ ಸತ್ವವನ್ನು ಇಂದಿನ ಪೀಳಿಗೆ ಅರಿತುಕೊಳ್ಳಬೇಕಾಗಿದೆ. ಕನ್ನಡವು ಶಾಸ್ತ್ರೀಯ ಹಾಗೂ ಪ್ರಾಚೀನ ಭಾಷೆಯಾಗಿದ್ದು, ಕನ್ನಡದ ಸಾಹಿತ್ಯ ಮತ್ತು ಪರಂಪರೆಯನ್ನು ಇತರ ಭಾಷೆಗಳಿಗೆ ಅನುವಾದಿಸುವುದರ ಜೊತೆಗೆ ಇಂದಿನ ವಿದ್ಯಾರ್ಥಿಗಳು ಕನ್ನಡ ಸಾಹಿತ್ಯವನ್ನು ಮತ್ತಷ್ಟು ಆಳವಾಗಿ ಅಧ್ಯಯನ ಮಾಡಬೇಕು ಎಂದು ಹೇಳಿದರು.
ಕಮ್ಮಟದ ಕುರಿತು ಮೈಸೂರಿನ ಭಾರತೀಯ ಭಾಷಾ ಸಂಸ್ಥಾನದ ನಿರ್ದೇಶಕರಾದ ಪೆÇ್ರ. ಬಸವರಾಜ ಎಂ. ಕೋಡಗುಂಟಿ ಅವರು ಮತ್ತು ಹೊಸಕೋಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮಲಿಂಗಪ್ಪ ಟಿ. ಬೇಗೂರು ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಕನ್ನಡ ವಿಮರ್ಶೆ ಮತ್ತು ತಾತ್ಮೀಕರಣ ಕುರಿತು ಸಿಯುಕೆಯ ಮಾನವಿಕ ಮತ್ತು ಭಾಷಾ ನಿಕಾಯದ ಡೀನ್ ಪೆÇ್ರ. ಗಣೇಶ್ ಪವಾರ್ ಮಾತನಾಡಿದರು.
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯ-ಸಂಚಾಲಕರಾದ ಸಿದ್ಧರಾಮ ಹೊನ್ಕಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿಯುಕೆ ಕನ್ನಡ ವಿಭಾಗದ ಮುಖ್ಯಸ್ಥರಾದ ಪೆÇ್ರ. ಶಿವಗಂಗಾ ರಮ್ಮಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಮ್ಮಟದ ಮೊದಲ ದಿನ ವಿ.ಬಿ. ತಾರಕೇಶ್ವರ ಅವರು ‘ಅನುವಾದ ಕೃತಿಗಳಲ್ಲಿನ ಕನ್ನಡ ವಿಮರ್ಶೆಯ ಪರಿಕಲ್ಪನೀಕರಣ, ಕನ್ನಡ ಸಾಹಿತ್ಯ ಚರಿತ್ರೆ ಕುರಿತು ಡಾ. ರಾಮಲಿಂಗಪ್ಪ ಟಿ. ಬೇಗೂರು ಹಾಗೂ ಪದ್ಮಪ್ರಸಾದ ಅವರು ಅವರು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಪೆÇ್ರ. ವಿಕ್ರಮ ವಿಸಾಜಿ, ಡಾ. ಅಪ್ಪಗೆರೆ ಸೋಮಶೇಖರ, ಡಾ. ಟಿ.ಡಿ ರಾಜಣ್ಣ, ಡಾ. ರೋಹಿಣಾಕ್ಷ ಶಿರ್ಲಾಲು ಸೇರಿದಂತೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯರು, ಸಿಯುಕೆಯ ಪ್ರಾಧ್ಯಾಪಕರು, ಸಂಶೋಧನಾ ವಿದ್ಯಾರ್ಥಿಗಳು, ವಿದ್ಯಾರ್ಥಿಗಳು, ಸಂಪನ್ಮೂಲ ವ್ಯಕ್ತಿಗಳು ಹಾಗೂ ರಾಜ್ಯದ ವಿವಿಧ ಭಾಗಗಳ ಪ್ರತಿನಿಧಿಗಳು ಆನ್‍ಲೈನ್ ಮತ್ತು ಆಫ್‍ಲೈನ್ ಮೂಲಕ ಭಾಗವಹಿಸಿದ್ದರು.ಇಂದಿನಿಂದ ಆರಂಭವಾದ ಕಮ್ಮಟವು ಮೂರು ದಿನಗಳ ಕಾಲ ವಿವಿಧ ಗೋಷ್ಠಿಗಳು, ಸಂವಾದಗಳು ನಡೆಯಲಿವೆ.























