ಸಿಡಿಲು ಬಡಿದು ಕುರಿಗಾಯಿ ಯುವಕ ಸಾವು

ಯಾದಗಿರಿ :ಜೂ.13: ಸಾಯಂಕಾಲ ಸಮಯ ಸುಮಾರು 7-30 ನಿಮಿಷಕ್ಕೆ ಸುರಿದ ಮಳೆ ಹಿನ್ನೆಲೆಯಲ್ಲಿ ಸಿಡಿಲು ಬಡಿದು ಕುರಿಗಾಹಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಪೇಠ ಅಮ್ಮಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹಾಳ ಅಮ್ಮಾಪೂರ ಗ್ರಾಮದ ಕುರಿಗಾಹಿ ಯುವಕ ಮರೆಪ್ಪ ತಂ/ಅಯ್ಯಪ್ಪ ದೇವಡಿ (21) ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಸುರಪುರ ಪೆÇೀಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.