ರೀಲ್ಸ್ ಹುಚ್ಚಿಗೆ ಟ್ರ್ಯಾಕ್ಟರ್‍ಗೆ ಸಿಕ್ಕು ಪ್ರಾಣ ಕಳೆದುಕೊಂಡ ಯುವಕ

ಕಲಬುರಗಿ,ಜ.22: ರೀಲ್ಸ್ ಮಾಡಲು ಹೋಗಿ ಟ್ರ್ಯಾಕ್ಟರ್ ಚಕ್ರಕ್ಕೆ ಸಿಲುಕಿ ಯುವಕ ಪ್ರಾಣ ಕಳೆದುಕೊಂಡ ಘಟನೆ
ಕಲಬುರಗಿ ಜಿಲ್ಲೆ ಕಮಲಾಪುರ ತಾಲ್ಲೂಕಿನ ಮಹಾಗಾಂವ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ
ಮಹಾಗಾಂವ ನಿವಾಸಿ ಲೋಕೇಶ ಕಲ್ಲಪ್ಪ ಪೂಜಾರಿ (22) ಮೃತ ಯುವಕ. ಟ್ರ್ಯಾಕ್ಟರ್ ಚಾಲಕನಾಗಿದ್ದ ಈತ ಟ್ರ್ಯಾಕ್ಟರ್ ಚಲಿಸುವಾಗಲೇ ಒಂದು ಕೈಯಲ್ಲಿ ಮೊಬೈಲ್ ಹಿಡಿದು ರೀಲ್ಸ್ ಮಾಡುತ್ತಾ ಇನ್ನೊಂದು ಕೈಯಲ್ಲಿ ಸ್ಟೇರಿಂಗ್ ಹಿಡಿದುಕೊಂಡಿರುತ್ತಿದ್ದ.
ಕಬ್ಬಿನ ಗದ್ದೆಯಲ್ಲಿ ಬುಧವಾರ ಟ್ರಾಕ್ಟರ್ ನೇಗಿಲು ಹೊಡೆಯುತ್ತಿದ್ದಾಗ ರೀಲ್ಸ್ ಮಾಡುವ ಸಮಯದಲ್ಲಿ ಕಾಲು ಜಾರಿ ಬಿದ್ದು ಟ್ರ್ಯಾಕ್ಟರ್ ಚಕ್ರದ ಕೆಳಗೆ ಸಿಕ್ಕು ಸಾವಿಗೀಡಾಗಿದ್ದಾನೆ
ಮಹಾಂಗಾವ್ ಪೆÇಲೀಸ್ ಠಾಣೆಯಯಲ್ಲಿ ಪ್ರಕರಣ ದಾಖಲಾಗಿದೆ