
ಭಾಲ್ಕಿ:ಮಾ.9:ವಿದ್ಯಾರ್ಥಿಗಳು, ಸೋಲು-ಗೆಲುವನ್ನು ಲೆಕ್ಕಿಸದೆ ಸ್ಪರ್ಧೆಗಳಲ್ಲಿ ತೊಡಗುವುದರ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು ಎಂದು ಹಿರೇಮಠದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು.
ಪಟ್ಟಣದ ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ನಿಮಿತ್ತ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಮಕ್ಕಳಲ್ಲಿ ಅಗಾಧವಾದ ಪ್ರತಿಭೆ ಅಡಗಿದೆ. ಅವರಿಗೆ ಪ್ರತಿಭೆಯನ್ನು ಪ್ರದರ್ಶಿಸಿಲು ಸೂಕ್ತ ವೇದಿಕೆಯ ಅಗತ್ಯವಿದೆ. ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ನಿಮಿತ್ತ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸುವುದರ ಮೂಲಕ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭಾ ಪ್ರದರ್ಶನಕ್ಕೆ ಒಂದು ಒಳ್ಳೆಯ ವೇದಿಕೆ ಕಲ್ಪಿಸಿಕೊಡಲಾಗಿದೆ ಎಂದು ತಿಳಿಸಿದರು.
ಪೂಜ್ಯರ ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ ಮಾನವೀಯ ಕಾರ್ಯಗಳು ಇಂದಿನ ಯುವ ಪೀಳಿಗೆ ಅರಿಯುವುದರ ಮೂಲಕ ದೇಶದ ಸತ್ಪ್ರಜೆಗಳಾಗಿ ರೂಪಗೊಳ್ಳಬೇಕು ಎಂದು ಹೇಳಿದರು.
ರಾಷ್ಟ್ರೀಯ ಜನಪದ ಬುಡಕಟ್ಟು ಕಲಾ ಪರಿಷತ್ ನವದೆಹಲಿಯ ಪ್ರಧಾನ ಕಾರ್ಯದರ್ಶಿ ರಾಜಕುಮಾರ ಹೆಬ್ಬಾಳೆ ಮಾತನಾಡಿ,
ವಿದ್ಯಾರ್ಥಿಗಳು ಪಠ್ಯ ವಿಷಯಗಳ ಜೊತೆಗೆ ವಚನ ಸಾಹಿತ್ಯವನ್ನು ಅಧ್ಯಯನ ಮಾಡುವುದರ ಮೂಲಕ ಸಂಸ್ಕಾರಯುತ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು.
ಪಟ್ಟದ್ದೇವರ ಜೀವನ ಸಂದೇಶವನ್ನು ತಮ್ಮ ಬದುಕಿನಲ್ಲಿ ಆದರ್ಶವಾಗಿಟ್ಟುಕೊಳ್ಳಬೇಕು ಎಂದು ತಿಳಿಸಿದರು.
ಪ್ರಭುಲಿಂಗ, ಶಿವಬಸವ ಸ್ವಾಮೀಜಿ ಸಮ್ಮುಖ ವಹಿಸಿದ್ದರು.
ಎಂ.ಬಂಡೆಪ್ಪ ಶರಣರು, ಶಂಭುಲಿಂಗ ಕಾಮಣ್ಣ, ಮಲ್ಲಮ್ಮ ಆರ್.ಪಾಟೀಲ, ಚಂದ್ರಕಾಂತ ಹೈಬತಪುರೆ, ರುದ್ರಾಣಿ ವಿಲಾಸ ಬಕ್ಕಾ, ಶಂಕರ ಪಾಟೀಲ ಡಾ.ಸಜ್ಜಲ ಬಳತೆ, ಸುವರ್ಣಾ ಬಲ್ಲೂರೆ, ಸಂಗ್ರಾಮಪ್ಪ ಇಂಗಳೆ, ಗುಂಡಪ್ಪ ಸಂಗಮಕರ, ಶಿಖರೇಶ್ವರ ಶೆಟಕಾರ, ರಾಜು ಜುಬರೆ ಇದ್ದರು.
ಬಸವರಾಜ ಪ್ರಭಾ ಪ್ರಾಸ್ತಾವಿಕ ಮಾತನಾಡಿದರು.
ಲಕ್ಷ್ಮಣ ಮೇತ್ರೆ ನಿರೂಪಿಸಿದರು. ಮುಖ್ಯಶಿಕ್ಷಕ ಬಾಬು ಬೆಲ್ದಾಳ ವಂದಿಸಿದರು.






















