ಹಾನಗಲ್,ಅ27: ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶಾಸಕ ಶ್ರೀನಿವಾಸ ಮಾನೆ ಜನತಾ ದರ್ಶನ ನಡೆಸಿ, ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.
ತಾಲೂಕಿನ ನಾನಾ ಗ್ರಾಮಗಳಿಂದ ಆಗಮಿಸಿದ್ದ ನೂರಾರು ಸಾರ್ವಜನಿಕರು ತಮ್ಮ ಸಮಸ್ಯೆ, ಮೂಲಭೂತ ಸೌಲಭ್ಯಗಳ ಕೊರತೆ, ರಸ್ತೆ, ನೀರು, ವಿದ್ಯುತ್ ಸೇರಿದಂತೆ ಹತ್ತಾರು ಅಹವಾಲುಗಳನ್ನು ಸಲ್ಲಿಸಿದರು.
ಅಹವಾಲನ್ನು ಆಲಿಸಿ ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳಿಗೆ ಕರೆ ಮಾಡಿ ಸೂಕ್ತ ಸೂಚನೆ ನೀಡಿದರು. ಕೆಲ ತುರ್ತು ವಿಷಯಗಳಿಗೆ ಸ್ಥಳದಲ್ಲಿಯೇ ಪರಿಹಾರ ದೊರಕಿಸಿದರು.
ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸುವುದು ನನ್ನ ಮೊದಲ ಆದ್ಯತೆ. ಜನರ ಮಧ್ಯೆ ಇರುವುದರಿಂದ ಅವರ ದೂರು, ದುಮ್ಮಾನಗಳನ್ನು ಆಲಿಸಲು ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ವಾರದಲ್ಲಿ ಒಂದು ದಿನ ಕಡ್ಡಾಯವಾಗಿ ಸಾರ್ವಜನಿಕರ ಭೇಟಿಗೆ ಲಭ್ಯನಿದ್ದು, ಸಮಸ್ಯೆಗಳನ್ನು ಪರಿಹರಿಸಲು ಕಾಳಜಿ ವಹಿಸಿದ್ದಾಗಿ ಶಾಸಕ ಈ ಸಂದರ್ಭದಲ್ಲಿ ತಿಳಿಸಿದರು.






















