
ಚಿಂಚೋಳಿಏ.25: ರಾಷ್ಟ್ರೀಯ ಹೆದ್ದಾರಿ 167ರಲ್ಲಿ ಶುಕ್ರವಾರ ಮಧ್ಯಾಹ್ನ ಸರಣಿ ಅಪಘಾತ ಸಂಭವಿಸಿದ್ದು, ಹತ್ತು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ
ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಲ್ಕರ್ ವಾಹನ, ಸಾರಿಗೆ ಸಂಸ್ಥೆಯ ಬಸ್ ಮತ್ತು ಟಂ ಟಂ (ಆಟೋ ರಿಕ್ಷಾ) ನಡುವೆ ಈ ಅಪಘಾತ ಸಂಭವಿಸಿದೆ. ಮೂರು ವಾಹನಗಳ ನಡುವೆ ನಡೆದ ಈ ಡಿಕ್ಕಿಯ ರಭಸಕ್ಕೆ ಟಂ ಟಂ ಹಾಗೂ ಬಸ್‍ನಲ್ಲಿದ್ದ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಚಿಂಚೋಳಿ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.






















