Home ಕ್ರೈಂ ಸುದ್ದಿಗಳು ಕಸ ವಿಲೇವಾರಿ ವಾಹನ-ಬೈಕ್ ನಡುವೆ ಅಪಘಾತ: ಓರ್ವನ ಸ್ಥಿತಿ ಗಂಭೀರ

ಕಸ ವಿಲೇವಾರಿ ವಾಹನ-ಬೈಕ್ ನಡುವೆ ಅಪಘಾತ: ಓರ್ವನ ಸ್ಥಿತಿ ಗಂಭೀರ

ಜಮಖಂಡಿ, ಜೂ. 28: ನಗರದ ಹೊರವಲಯದ ಜಂಬಗಿ ರಸ್ತೆಯ ವಿಶ್ವರಾಧ್ಯ ಶಾಲೆ ಸಮೀಪ ನಗರಸಭೆಯ ಕಸ ವಿಲೇವಾರಿ ಟಾಟಾ ಎಸ್ ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಬೈಕ್ ಸವಾರನ ಸ್ಥಿತಿ ಚಿಂತಾಜನಕವಾಗಿದ್ದು, ಮತ್ತೋರ್ವರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ.

ಅಪಘಾತದಲ್ಲಿ ಗಾಯಗೊಂಡ ಬೈಕ್ ಸವಾರರನ್ನು ತಕ್ಷಣ ಜಮಖಂಡಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಕಂಕಣವಾಡಿ ಗ್ರಾಮದ 33 ವರ್ಷದ ಸೋಮನಾಥ ಹಿರೇಮಠ ಅವರನ್ನು ಹೆಚ್ಚಿನ ಚಿಕಿತ್ಸೆಗೆ ವಿಜಯಪುರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಮತ್ತೋರ್ವ ಬೈಕ್ ಸವಾರ ಮುತ್ತೂರು ಗ್ರಾಮದ ಸುಭಾಷ್ ಕೊಗಟನೂರ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ನಗರಸಭೆಯ ಕಸ ವಿಲೇವಾರಿ ವಾಹನದ ಚಾಲಕನನ್ನು ಬಸವರಾಜ ನವಣಿ ಎಂದು ಗುರುತಿಸಲಾಗಿದ್ದು, ವಾಹನದಲ್ಲಿದ್ದ ಮತ್ತೋರ್ವ ಸಿಬ್ಬಂದಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಅವರನ್ನು ಜಮಖಂಡಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಪಿ.ಎಸ್.ಐ. ಗಂಗಾಧರ ಪೂಜೇರಿ ನೇತೃತ್ವದ ಜಮಖಂಡಿ ಗ್ರಾಮೀಣ ಪೆÇಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ಕುರಿತು ಜಮಖಂಡಿ ಗ್ರಾಮೀಣ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುವ ಸಾಧ್ಯತೆ ಇದ್ದು, ಹೆಚ್ಚಿನ ಮಾಹಿತಿ ಪೆÇಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.