
ಅಥಣಿ : 2026-27ನೇ ಸಾಲಿನ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಅಥಣಿ ಪಟ್ಟಣದ ವಿಕ್ರಮಪುರ ಬಡಾವಣೆಯಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಹಾಗೂ ಉನ್ನತೀಕರಿಸಿದ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿ ಶಾಲೆಗೆ ಕೀರ್ತಿ ತಂದಿದ್ದಾರೆ.
ಪ್ರಾಥಮಿಕ ವಿಭಾಗದಲ್ಲಿ ತನುಜಾ ಯುವರಾಜ ಕಾಂಬಳೆ ಅವರು ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ, ದಿವ್ಯಾ ರಾಮ ನಾಟಿಕಾರ 100 ಮೀ. ಓಟದಲ್ಲಿ ತೃತೀಯ ಸ್ಥಾನ ಹಾಗೂ ರಾಧಿಕಾ ಆನಂದ ಕೋಳಿ 600 ಮೀ. ಓಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.
ಪ್ರೌಢ ವಿಭಾಗದಲ್ಲಿ ಸಾಕ್ಷಿ ಶಿಂಗೆ 3000 ಮೀ. ಓಟದಲ್ಲಿ ಪ್ರಥಮ ಸ್ಥಾನ, ರಕ್ಷಿತಾ ಕೋಳಿ 3000 ಮೀ. ಓಟದಲ್ಲಿ ದ್ವಿತೀಯ ಸ್ಥಾನ, ಸೃಷ್ಟಿ ಭಂಡಾರಿ 1500 ಮೀ. ಓಟದಲ್ಲಿ ದ್ವಿತೀಯ ಸ್ಥಾನ, ಶ್ರೇಯಾ ಭಂಡಾರಿ 1500 ಮೀ. ಓಟದಲ್ಲಿ ತೃತೀಯ ಸ್ಥಾನ, ಸಂಸ್ಕøತಿ ನಾಯಿಕ 800 ಮೀ. ಓಟದಲ್ಲಿ ತೃತೀಯ ಸ್ಥಾನ ಹಾಗೂ ಮಹಮ್ಮದ್ ಶಾಹಿದ್ ನಾಲಬಂದ ಚಕ್ರ ಎಸೆತದಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ.
ವಲಯ ಮಟ್ಟದ ಕ್ರೀಡಾ ಕೂಟದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಗಮನಾರ್ಹ ಸಾಧನೆ ಮಾಡಿದ ವಿದ್ಯಾರ್ಥಿಗಳ ಸಾಧನೆಯನ್ನು ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ರಾಕೇಶ ಮೈಗೂರ ಮುಕ್ತಕಂಠದಿಂದ ಪ್ರಶಂಸಿಸಿ. ಅಭಿನಂದಿಸಿ, ಅವರ ಕ್ರೀಡಾ ಪ್ರತಿಭೆಗೆ ಮೆಚ್ಚುಗೆ ವ್ಯಕ್ತಪಡಿಸಿ ಮಾತನಾಡಿ
ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವ ಬೆಳೆಸುವ ಜೊತೆಗೆ ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆಗಳು ಮಹತ್ವದ ಪಾತ್ರ ವಹಿಸುತ್ತವೆ. ಸೋಲು- ಗೆಲುವು ಸಮಾನವಾಗಿ ಸ್ವೀಕರಿಸಿ, ನಿರಂತರ ಪರಿಶ್ರಮದ ಮೂಲಕ ಗುರಿ ಸಾಧಿಸುವ ಗುಣವನ್ನು ಕ್ರೀಡೆ ಕಲಿಸುತ್ತದೆ
ಕ್ರೀಡೆ ವಿದ್ಯಾರ್ಥಿಗಳಲ್ಲಿ ದೈಹಿಕ ಸಾಮಥ್ರ್ಯದ ಜೊತೆಗೆ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ತಂಡ ಮನೋಭಾವ ಬೆಳೆಸುತ್ತದೆ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ತಮ್ಮ ಪ್ರತಿಭೆಯನ್ನು ಮತ್ತಷ್ಟು ಬೆಳೆಸಿಕೊಳ್ಳಬೇಕು ಎಂದರು
“ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೋರಿದ ಉತ್ಸಾಹ, ಶಿಸ್ತು ಮತ್ತು ಪರಿಶ್ರಮ ಶ್ಲಾಘನೀಯ. ಕ್ರೀಡಾ ಕ್ಷೇತ್ರದಲ್ಲಿ ದೊರೆಯುವ ಪ್ರತಿಯೊಂದು ಅವಕಾಶವನ್ನು ಸದುಪಯೋಗಪಡಿಸಿಕೊಂಡು, ಶಾಲೆ ಹಾಗೂ ಪೆÇೀಷಕರಿಗೆ ಹೆಮ್ಮೆ ತರುವಂತಹ ಸಾಧನೆ ಮಾಡಬೇಕು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಗತ್ಯವಾದ ಸಹಾಯ ಸಹಕಾರ ಮತ್ತು ಪೆÇ್ರೀತ್ಸಾಹ ನೀಡಲು ಶಾಲೆಯ ಆಡಳಿತ ಮಂಡಳಿ ಸದಾ ಸಿದ್ಧ ಎಂದ ಅವರು
ವಿದ್ಯಾರ್ಥಿಗಳ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಹಾಗೂ ಪೆÇೀಷಕರ ಪೆÇ್ರೀತ್ಸಾಹದಿಂದ ಇಂತಹ ಸಾಧನೆ ಸಾಧ್ಯವಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಮಟ್ಟದಲ್ಲಿ ಸಾಧನೆ ಮಾಡುವಂತಾಗಲಿ” ಎಂದು ಎಸ್ಡಿಎಂಸಿ ಅಧ್ಯಕ್ಷ ರಾಕೇಶ ಮೈಗೂರ ಶುಭ ಹಾರೈಸಿದರು.
ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ಎಲ್ಲ ಕ್ರೀಡಾಪಟುಗಳನ್ನು ಶಾಲೆಯ ಪ್ರಧಾನ ಗುರುಗಳಾದ ಡಿ.ಎಸ್. ಬಸರಗಿ, ಡಿ.ಎಸ್. ಗುಡದಿನ್ನಿ. ಎಸ್.ಎಸ್. ಮುಗಳಕೊಡ, ಪಿ.ಎಸ್. ವಾಗಮೋಡೆ, ಬಿ.ವಿ. ಬರಡಗಿ, ಎಲ್.ಎನ್. ನಿಡೋಣಿ ಸೇರಿದಂತೆ ಶಿಕ್ಷಕ ವೃಂದ ಹಾಗೂ ಎಸ್ಡಿಎಂಸಿ ಸದಸ್ಯರಾದ ರಾಜೀವ ಢಾಲೆ ಹಾಗೂ ಬಸೀರಾ ಮಮದಾಪೂರ ಅವರು ವಿದ್ಯಾರ್ಥಿಗಳ ಸಾಧನೆಗೆ ಅಭಿನಂದಿಸಿ ಮೆಚ್ಚುಗೆ ವ್ಯಕ್ತಪಡಿಸಿ, ಮುಂದಿನ ಹಂತದ ಸ್ಪರ್ಧೆಗಳಲ್ಲಿಯೂ ಉತ್ತಮ ಪ್ರದರ್ಶನ ನೀಡುವಂತೆ ಶುಭ ಹಾರೈಸಿದರು.























