
ಕಮಲನಗರ:ಮಾ.೧೧: ಪ್ರಸ್ತೂತ ದಿನಗಳಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡಿದ್ದು, ಸಮಾಜದಲ್ಲಿ ಮಹಿಳೆಯರ ಪಾತ್ರ ಅಪಾರವಾಗಿದೆ ಎಂದು ಬೀದರನ ಸೋಕೋ ಆಫೀಸರ್ ರೇವಣಸಿದ್ಧಯ್ಯ ಸ್ಥಾವರಮಠ ಹೇಳಿದರು.
ಶಾಸ್ತ್ರೀ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ನಡೆಯುತ್ತಿರುವ ಪಟ್ಟಣದ ಭಾಗಿರಥಿ ಪಬ್ಲಿಕ್ ಶಾಲೆಯಲ್ಲಿ ಮಂಗಳವಾರ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಅಂಗವಾಗಿ ಅವರು ಸಾವಿತ್ರಿಬಾಯಿ ಫುಲೆ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಅವರು ಮಾತನಾಡಿದರು.
ಮಹಿಳೆಯರಿಲ್ಲದ ಕ್ಷೇತ್ರವೇ ಇಲ್ಲ. ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ಕಾಲಿರಿಸಿ ಗಣನೀಯವಾದ ಸಾಧನೆ ಮಾಡಿದ್ದಾರೆ. ಇಂದು ಪುರುಷರಿಗಿಂತ ಮಹಿಳೆಯರೇನೂ ಕಡಿಮೆಯಿಲ್ಲ ಎಂದ ಸಾಧನೆಯ ಮೂಲಕ ಸಾಬೀತುಪಡಿಸಿದ್ದಾರೆ ಎಂದು ಹೇಳಿದರು.
ಶಾಲೆ ಮುಖ್ಯಶಿಕ್ಷಕ ಮನೋಜಕುಮಾರ ಹಿರೇಮಠ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳಾ ಮೀಸಲಾತಿ ಕಾಯ್ದೆ ಸಮರ್ಪಕವಾಗಿ ಅನುಷ್ಠಾನಗೊಳಿಸಿದರೆ ರಾಜ್ಯದಲ್ಲಿ ೭೩ ಜನ ಶಾಸಕಿಯರಾಗುವ ಅವಕಾಶ ಒದಗಿಬರಲಿದೆ. ಈ ನಿಟ್ಟಿನಲ್ಲಿ ಮಹಿಳೆಯರು ರಾಜಕೀಯದಲ್ಲೂ ಪ್ರಭುತ್ವ ಸಾಧಿಸಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬೀದರ್ ಡಿಎಆರ್‌ನ ಎಆರ್‌ಎಸ್‌ಐ ಅಶೋಕ ಶ್ವಾನದಳ, ಬೀದರನ ಎಆರ್‌ಎಸ್‌ಐ ಶ್ರೀನಿವಾಸ ಕುಲಕರ್ಣಿ, ಎಎಸ್‌ಐ ವೀರಶೇಟ್ಟಿ ಸಾವಳೆ, ಸತೀಷ ಗಂಗಣೆ, ಮಲ್ಲಿಕಾರ್ಜುನ ಮೇತ್ರೆ, ಶ್ರೀದೇವಿ, ರಾಜಶ್ರೀ, ಅಂಬಿಕಾ, ವಾಣೀಶ್ರೀ, ದೀಪಮಾಲಾ, ಸಂಗೀತಾ ಸೇರಿದಂತೆ ಶಾಲೆ ಮಕ್ಕಳು ಇದ್ದರು.




















