
ಕಲಬುರಗಿ,ಏ.27: ನಗರದ ಕೆಕೆಆರ್‍ಡಿಬಿ ಸಭಾಂಗಣದಲ್ಲಿ ಇಂದು ಯಡ್ರಾಮಿ ಮತ್ತು ಜೇವರ್ಗಿ ತಾಲೂಕಿನ ತಹಸೀಲ್ದಾರರೊಂದಿಗೆ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಶಾಸಕ ಡಾ. ಅಜಯ್ ಸಿಂಗ್ ಅವರು ಅಧಿಕಾರಿಗಳ ಜೊತೆಗೆ ಮಹತ್ವದ ಸಭೆ ನಡೆಸಿದರು.
ಬೇಸಿಗೆಯ ಬಿಸಿಲಿನ ಬೇಗೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಎರಡೂ ತಾಲೂಕುಗಳ ಪಟ್ಟಣ ಹಾಗೂ ಹಳ್ಳಿಗಳಲ್ಲಿ ಜನರಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ಎಚ್ಚರವಹಿಸಲು ಚರ್ಚಿಸಲಾಯಿತು.
ಈ ನಿಟ್ಟಿನಲ್ಲಿ, ತುರ್ತು ಅಗತ್ಯಗಳನ್ನು ಪೂರೈಸಲು ಮತ್ತು ನಿರಂತರ ಮೇಲ್ವಿಚಾರಣೆ ನಡೆಸಲು ವಿಶೇಷ ಕಾರ್ಯಪಡೆಯನ್ನು ರಚಿಸಲಾಯಿತು.
ಎರಡೂ ತಾಲೂಕುಗಳ ಜನತೆಗೆ ನೀರಿನ ಸಮಸ್ಯೆ ಉಂಟಾಗದಂತೆ ಆಡಳಿತ ವರ್ಗವು ಸಂಪೂರ್ಣ ಬದ್ಧತೆಯಿಂದ ಕಾರ್ಯನಿರ್ವಹಿಸುವಂತೆ ಈ ಸಂದರ್ಭದಲ್ಲಿ ಡಾ. ಅಜಯ್ ಸಿಂಗ್ ಅವರು ಖಡಕ್ ಸೂಚನೆ ನೀಡಿದರು.




















