
ನವದೆಹಲಿ,ಮೇ.4-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸಲ್ಲಿಸಿರುವ ಹೊಸ ಜಾಮೀನು ಅರ್ಜಿ ಇಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯಿತು.
ನ್ಯಾಯಮೂರ್ತಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ವಿಜಯ್ ಬಿಷ್ನೋಯಿ ಅವರ ಪೀಠದಲ್ಲಿ ವಿಚಾರಣೆ ನಡೆಯಿತು. ಪ್ರಕರಣದ ಎ ೨ ಆರೋಪಿ ದರ್ಶನ್ ಪರವಾಗಿ ಹಿರಿಯ ವಕೀಲ ಮುಕುಲ್ ರೋಹ್ಟಗಿ ವಾದ ಮಂಡಿಸಿದರು.
ಎಂಟು ತಿಂಗಳು ಕಳೆದರೂ ಕೂಡ ಈ ಸಾಕ್ಷಿಗಳ ವಿಚಾರಣೆ ಮುಕ್ತಾಯವಾಗಿಲ್ಲ. ೨೭೩ ಸಾಕ್ಷಿಗಳ ಪೈಕಿ ಕೇವಲ ೧೫ ಸಾಕ್ಷಿಗಳ ವಿಚಾರಣೆಯಷ್ಟೇ ಆಗಿದೆ. ಇದೇ ರೀತಿಯಾದರೆ ವಿಚಾರಣೆ ಮುಗಿಯಲು ಹಲವು ವರ್ಷಗಳೇ ಬೇಕು. ದರ್ಶನ್ ಗೆ ಜಾಮೀನು ಮಂಜೂರು ಮಾಡಿ ಎಂದು ದರ್ಶನ್ ಪರ ವಕೀಲರು ಅರ್ಜಿಯಲ್ಲಿ ಹೇಳಿದ್ದಾರೆ.
ಕನಿಷ್ಠ ಸೌಲಭ್ಯಗಳೂ ದರ್ಶನ್‌ಗೆ ಸಿಗುತ್ತಿಲ್ಲ, ಕ್ವಾರೆಂಟೇನ್ ಸೆಲ್‌ನಲ್ಲಿ ಇಡಲಾಗಿದೆ… ಕನಿಷ್ಟ ಸೌಲಭ್ಯಗಳ ಕುರಿತು ಕೋರ್ಟ್‌ಗೆ ಹೋದರೆ ಸುಪ್ರೀ ಕೋರ್ಟ್‌ನಲ್ಲಿ ಆದೇಶ ಆಗಿದೆ ಎಂದು ಸೆಷನ್ಸ್ ಕೋರ್ಟ್ ಹೇಳಿದೆ ಎಂದು ದರ್ಶನ್ ಪರ ವಕೀಲರು ವಾದ ಮಂಡಿಸಿದರು
ವರದಿ ಕೇಳಿದ ಸುಪ್ರೀಂ:
ಎಷ್ಟು ಸಾಕ್ಷಿಗಳ ವಿಚಾರಣೆ ಈವರೆಗೆ ನಡೆದಿದೆ..? … ಎಷ್ಟು ಸಾಕ್ಷಿಗಳನ್ನು ವಿಚಾರಣೆಗಾಗಿ ಪ್ರಾಸಿಕ್ಯೂಷನ್ ಸೂಚಿಸಿದೆ.? … ಟ್ರಯಲ್ ಮುಗಿಯಲು ಎಷ್ಟು ದಿನ ಬೇಕಾಗುತ್ತದೆ..? ದರ್ಶನ್‌ಗೆ ಕನಿಷ್ಟ ಸೌಲಭ್ಯ ನೀಡಲಾಗುತಿದೆಯೇ.? ಇಲ್ಲವೆ? ಎಂದು ಒಂದು ವಾರದಲ್ಲಿ ವರದಿ ನೀಡುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಸೆಷನ್ಸ್ ಕೋರ್ಟ್‌ನಿಂದ ಸುಪ್ರೀಂ ಕೋರ್ಟ್ ವರದಿ ಕೇಳಿದೆ. ವರದಿ ಸಲ್ಲಿಕೆ ಬಳಿಕ ಮುಂದಿನ ವಿಚಾರಣೆ ದಿನಾಂಕ ನೀಡುವುದಾಗಿ ತಿಳಿಸಿದ ಸುಪ್ರೀಂ ಕೋರ್ಟ್ ಹೇಳಿದೆ.
ಪ್ರಕರಣದ ಟ್ರಯಲ್ ತೀರಾ ನಿಧಾನಗತಿಯಲ್ಲಿ ನಡೆಯುತ್ತಿದೆ,೭ತಿಂಗಳ ವಿಚಾರಣೆಯಲ್ಲಿ ಕೇವಲ ೧೦ಸಾಕ್ಷಿಗಳ ವಿಚಾರಣೆ ಮಾತ್ರ ಮುಗಿದಿದೆ, ೨೬೨ಸಾಕ್ಷಿಗಳಿದ್ದು ಇದೇ ರೀತಿ ವಿಚಾರಣೆ ನಡೆದರೆ ಸಾಕಷ್ಟು ಸಮಯ ತೆಗೆದುಕೊಳ್ಳಲಿದೆ ಜೈಲು ನಿಯಮಗಳಿಗೆ ವಿರುದ್ಧವಾಗಿ ಕ್ವಾರಟೈಂನ್ ಸೆಲ್ ನಲ್ಲಿ ಇಡಲಾಗಿದೆಬೇರೆ ವಿಚಾರಣಾಧೀನ ಖೈದಿಗಳಿಗೆ ಸಿಗುವ ಕನಿಷ್ಠ ಸೌಲಭ್ಯಗಳೂ ಸಿಗುತ್ತಿಲ್ಲ.
ದರ್ಶನಗೆ ಫೈವ್ ಸ್ಟಾರ್ ಸೌಲಭ್ಯ ಕೊಡಬೇಡಿ ಎಂದಿದ್ದೀರಿ. ಆದರೆ ಜೈಲು ಅಧಿಕಾರಿಗಳು ಮೂಲಭೂತ ಸೌಕರ್ಯ ಸಹ ನೀಡುತ್ತಿಲ್ಲ. ಇದೆ ವೇಳೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದ್ದು, ೫೭ನೇ ಸಿಸಿಎಚ್ ಕೋರ್ಟ್ ನಿಂದ ಸುಪ್ರೀಂ ಕೋರ್ಟ್ ವರದಿ ಕೇಳಿದೆ.
ದರ್ಶನ್ ಪ್ರಕರಣದ ಪ್ರಗತಿಯ ಬಗ್ಗೆ ಸುಪ್ರೀಂ ಕೋರ್ಟ್ ವರದಿ ಕೇಳಿದೆ ಇಲ್ಲಿಯವರೆಗೂ ಎಷ್ಟು ಸಾಕ್ಷಿಗಳ ವಿಚಾರಣೆ ನಡೆದಿದೆ? ಎಷ್ಟು ಸಾಕ್ಷಿಗಳ ವಿಚಾರಣೆ ಬಾಕಿಯಿದೆ? ವಿವರ ನೀಡಿ. ಸಾಕ್ಷಿ ವಿಚಾರಣೆ ಮುಗಿಯಲು ಎಷ್ಟು ಸಮಯ ಬೇಕು ಎಂದು ವರದಿ ನೀಡಿ. ಜೈಲಿನಲ್ಲಿ ದರ್ಶನ್ ಗೆ ಮೂಲಸೌಕರ್ಯ ಒದಗಿಸಲಾಗಿದೆಯೆ ಅಥವಾ ಇಲ್ಲವೇ? ಎಂದು ಒಂದು ವಾರದಲ್ಲಿ ವರದಿ ಸಲ್ಲಿಸಲು ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಪ್ರಕರಣ ಹಿನ್ನೆಲೆ:
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ೨೦೨೫ರ ಆಗಸ್ಟ್ ೧೪ರಂದು ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ದರ್ಶನ್ ಹಾಗೂ ಇತರ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸಿತ್ತು. ಕಳೆದ ಎಂಟು ತಿಂಗಳು ಕಳೆದರೂ ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡಿರಲಿಲ್ಲ. ಹಾಗಾಗಿ ದರ್ಶನ್ ಪರ ವಕೀಲರು ಸುಪ್ರೀಂಕೋರ್ಟ್‌ಗೆ ಹೊಸ ರಿಟ್ ಅರ್ಜಿ ಸಲ್ಲಿಸಿದ್ದು, ಜಾಮೀನಿಗೆ ಮನವಿ ಮಾಡಿದ್ದಾರೆ.
ದರ್ಶನ್‌ಗೆ ಜಾಮೀನು ಮಂಜೂರು ಮಾಡಬೇಕು ಎಂದು ದರ್ಶನ್ ಪರ ವಕೀಲರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ವಿಚಾರಣೆ ಮುಗಿದಿದ್ದು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದ್ದು, ಇದುವರೆಗೂ ಎಷ್ಟು ಸಾಕ್ಷಿಗಳ ವಿಚಾರಣೆ ನಡೆದಿದೆ ಎಷ್ಟು ಸಾಕ್ಷಿಗಳ ವಿಚಾರಣೆ ಬಾಕಿ ಇದೆ ಎಂದು ಒಂದು ವಾರದಲ್ಲಿ ವರದಿ ನೀಡಿ ಎಂದು ನೋಟಿಸ್ ಜಾರಿ ಮಾಡಿದೆ.

























