Home ಜಿಲ್ಲೆ ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ

ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ

ಕಲಬುರಗಿ,ಜು.31: ನಗರದ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಅವರು ಇಂದು ಭೇಟಿ ನೀಡಿದರು.
ಇತ್ತೀಚಿಗೆ ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳು ಪರಾರಿಯಾದ ಘಟನೆಯ ಹಿನ್ನೆಲೆಯಲ್ಲಿ ಅವರ ಈ ಭೇಟಿ ಮಹತ್ವ ಪಡೆದಿದೆ.
ಜೈಲಿನ ಆಡಳಿತ ಮತ್ತು ಭದ್ರತೆ ಕುರಿತು ತಪಾಸಣೆ ನಡೆಸಿದ ಅವರುಕೇಂದ್ರ ಕಾರಾಗೃಹದ ಅಧಿಕಾರಿಗಳಿಂದ ಈ ಬಗ್ಗೆ ಅವರು ಹೆಚ್ಚಿನ ಮಾಹಿತಿ ಪಡೆದರು.
ಈಗಾಗಲೇ ಇಬ್ಬರು ಕೈದಿಗಳನ್ನ ಬೀದರ್ ಜಿಲ್ಲಾ ಪೆÇಲೀಸರು ಬಂಧಿಸಿದ್ದಾರೆ. ಕೇಂದ್ರ ಕಾರಾಗೃಹದ ಒಳಗಡೆ ತೆರಳುವ ಮುನ್ನ ಅವರು ಗೌರವ ವಂದನೆ ಸ್ವೀಕರಿಸಿದರು