Home ಜಿಲ್ಲೆ ವಲಯ ಅರಣ್ಯಾಧಿಕಾರಿ ಹುದ್ದೆಗೆ ಪದೋನ್ನತಿ ಹೊಂದಿದ ಅಡಿವೆಪ್ಪ ದೊಡಮನಿಗೆ ಸನ್ಮಾನ

ವಲಯ ಅರಣ್ಯಾಧಿಕಾರಿ ಹುದ್ದೆಗೆ ಪದೋನ್ನತಿ ಹೊಂದಿದ ಅಡಿವೆಪ್ಪ ದೊಡಮನಿಗೆ ಸನ್ಮಾನ

ಅಥಣಿ : ಮೇ.31:ತಾಲೂಕಿನ ನದಿ ಇಂಗಳಗಾಂವ ಗ್ರಾಮದ ಅಡಿವೆಪ್ಪ ದೊಡಮನಿ ಅವರು ಉಪ ವಲಯ ಅರಣ್ಯಾಧಿಕಾರಿ ಹುದ್ದೆಯಿಂದ ವಲಯ ಅರಣ್ಯಾಧಿಕಾರಿ ಹುದ್ದೆಗೆ ಪದೋನ್ನತಿ ಹೊಂದಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಅವರನ್ನು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು
ಅರಣ್ಯ ಇಲಾಖೆಯಲ್ಲಿ ಪ್ರಾಮಾಣಿಕತೆ ಹಾಗೂ ಕರ್ತವ್ಯ ನಿಷ್ಠೆಯಿಂದ ಸೇವೆ ಸಲ್ಲಿಸಿದ ದೊಡಮನಿ ಅವರ ಪದೋನ್ನತಿಯು ಇಡೀ ಗ್ರಾಮಕ್ಕೆ ಹೆಮ್ಮೆ ತಂದಿದೆ ಸದ್ಯ ಅವರು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಅವರ ಸಾಧನೆಗೆ ಗ್ರಾಮಸ್ಥರು ಸಿಹಿ ಹಂಚಿ ಸಂಭ್ರಮಿಸಿದರು ಅವರ ಮುಂದಿನ ಸೇವಾವಧಿ ಇನ್ನಷ್ಟು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ನೂತನ ವಲಯ ಅರಣ್ಯಾಧಿಕಾರಿ ಅಡಿವೆಪ್ಪ ದೊಡಮನಿ ಮಾತನಾಡಿ ನನ್ನ ಈ ಸಾಧನೆಗೆ ಗ್ರಾಮಸ್ಥರ ಆಶೀರ್ವಾದ ಹಿರಿಯರ ಮಾರ್ಗದರ್ಶನ ಮತ್ತು ಸ್ನೇಹಿತರ ಸಹಕಾರವೇ ಕಾರಣ ಅರಣ್ಯ ಸಂರಕ್ಷಣೆ ನನ್ನ ಮೊದಲ ಆದ್ಯತೆಯಾಗಿದ್ದು ಜನರ ಸಹಕಾರದೊಂದಿಗೆ ಇನ್ನಷ್ಟು ಉತ್ತಮ ಸೇವೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ಈ ವೇಳೆ ಪತ್ರಕರ್ತರಾದ ವಿಲಾಸ ಕಾಂಬಳೆ, ಗೀರೆಪ್ಪಾ ಕಾಂಬಳೆ, ಮಹಾದೇವಿ ದೊಡಮನಿ, ಕಾವೇರಿ ದೊಡಮನಿ, ಸುನೀತಾ ಕಾಂಬಳೆ ಸೇರಿದಂತೆ ಗ್ರಾಮದ ಗಣ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.