Home ಜಿಲ್ಲೆ ಕಲಬುರಗಿ ಹದಿ ಹರೆಯದವರ ಆರೋಗ್ಯ ಮತ್ತು ಕ್ಷೇಮ ದಿನಾಚರಣೆ ಕಾರ್ಯಕ್ರಮ ಯಶಸ್ವಿ

ಹದಿ ಹರೆಯದವರ ಆರೋಗ್ಯ ಮತ್ತು ಕ್ಷೇಮ ದಿನಾಚರಣೆ ಕಾರ್ಯಕ್ರಮ ಯಶಸ್ವಿ

ದೇವಲ ಗಾಣಗಾಪುರ,ಆ.1-ದೇವಲ ಗಾಣಗಾಪುರ ಸಮುದಾಯ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ತೆಲ್ಲೂರ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕಿಶೋರ್ ಸ್ವಾಸ್ಥ್ಯ ಕಾರ್ಯಕ್ರಮ (ಖಏSಏ) ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿಷನ್ ಶಕ್ತಿ ಕಾರ್ಯಕ್ರಮದ ಸಂಯುಕ್ತ ಆಶ್ರಯದಲ್ಲಿ ಹದಿ ಹರೆಯದವರ ಆರೋಗ್ಯ ಮತ್ತು ಕ್ಷೇಮ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಆಪ್ತ ಸಮಾಲೋಚಕರಾದ ಮಲ್ಲಿಕಾರ್ಜುನ ಸಿಂಗೆ ಮಾತನಾಡಿ, ಹದಿ ಹರೆಯವು ಮಕ್ಕಳ ಜೀವನದ ಅತ್ಯಂತ ಮಹತ್ವದ ಬೆಳವಣಿಗೆಯ ಹಂತವಾಗಿದ್ದು, ಈ ಅವಧಿಯಲ್ಲಿ ದೈಹಿಕ, ಮಾನಸಿಕ ಹಾಗೂ ಭಾವನಾತ್ಮಕ ಬದಲಾವಣೆಗಳು ವೇಗವಾಗಿ ಸಂಭವಿಸುತ್ತವೆ. ಆದ್ದರಿಂದ ಸರಿಯಾದ ಆರೋಗ್ಯ ಮಾರ್ಗದರ್ಶನ ಅಗತ್ಯವಾಗಿದೆ ಎಂದು ತಿಳಿಸಿದರು.
ಪೌಷ್ಟಿಕ ಆಹಾರ ಸೇವನೆ, ವೈಯಕ್ತಿಕ ಸ್ವಚ್ಛತೆ, ನಿಯಮಿತ ವ್ಯಾಯಾಮ, ಸಮರ್ಪಕ ನಿದ್ರೆ ಹಾಗೂ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ ಎಂದು ಹೇಳಿದರು.
ಹದಿ ಹರೆಯದವರಲ್ಲಿ ರಕ್ತಹೀನತೆ ತಡೆ, ಋತುಸ್ರಾವದ ಸ್ವಚ್ಛತೆ, ಮಾನಸಿಕ ಆರೋಗ್ಯ, ವ್ಯಸನಗಳಿಂದ ದೂರವಿರುವುದು, ಲಿಂಗ ಸಮಾನತೆ, ಸುರಕ್ಷಿತ ವರ್ತನೆ ಹಾಗೂ ಆರೋಗ್ಯ ಸಮಸ್ಯೆಗಳ ಕುರಿತು ಆರೋಗ್ಯ ಸಿಬ್ಬಂದಿಯೊಂದಿಗೆ ಮುಕ್ತವಾಗಿ ಚರ್ಚಿಸುವ ಮನೋಭಾವ ಬೆಳೆಸಿಕೊಳ್ಳುವುದು ಅತ್ಯಂತ ಅಗತ್ಯವಾಗಿದೆ ಎಂದು ತಿಳಿಸಿದರು.
ರಾಷ್ಟ್ರೀಯ ಕಿಶೋರ್ ಸ್ವಾಸ್ಥ್ಯ ಕಾರ್ಯಕ್ರಮ (ಖಏSಏ) ಮೂಲಕ ಹದಿ ಹರೆಯದವರಿಗೆ ಆರೋಗ್ಯ ಶಿಕ್ಷಣ, ಸಮಾಲೋಚನೆ ಹಾಗೂ ಅಗತ್ಯ ಆರೋಗ್ಯ ಸೇವೆಗಳನ್ನು ಒದಗಿಸಲಾಗುತ್ತಿದ್ದು, “ಆರೋಗ್ಯವಂತ ಹದಿ ಹರೆಯದ ಮಕ್ಕಳು ಆರೋಗ್ಯಕರ ಸಮಾಜದ ಭದ್ರ ಅಡಿಪಾಯ” ಎಂಬ ಸಂದೇಶದೊಂದಿಗೆ ಎಲ್ಲರೂ ಹದಿ ಹರೆಯದವರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಕರೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿಷನ್ ಶಕ್ತಿ ಕಾರ್ಯಕ್ರಮದ ಜಿಲ್ಲಾ ಮಿಷನ್ ಸಂಯೋಜಕರಾದ ವಿಜಯಲಕ್ಷ್ಮಿ ಅವರು ‘ಬೇಟಿ ಬಚಾವೋ-ಬೇಟಿ ಪಡಾವೋ’, ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆ, ಹದಿ ಹರೆಯದವರಲ್ಲಿ ಉಂಟಾಗುವ ಗರ್ಭಧಾರಣೆ ಹಾಗೂ ಅದರ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕಿಯಾದ ಚನ್ನಮ್ಮ ಹಳೆಮನೆ, ಸಮುದಾಯ ಆರೋಗ್ಯ ಅಧಿಕಾರಿ (ಅಊಔ) ರಮೇಶ್, ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.