Home ಜಿಲ್ಲೆ ಹಿರಿಯ ನಾಗರಿಕರ ಗುರುತಿನ ಚೀಟಿ ಹಾಗೂ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಸಲಹೆ

ಹಿರಿಯ ನಾಗರಿಕರ ಗುರುತಿನ ಚೀಟಿ ಹಾಗೂ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಸಲಹೆ

ಬೀದರ್, ಸೆ 25 : ಹಿರಿಯ ನಾಗರಿಕರ ಗುರುತಿನ ಚೀಟಿಯ ಸೌಲಭ್ಯಗಳಾದ ಬಸ್ ಪಾಸ್, ಪ್ರಯಾಣ ದರ ರಿಯಾಯಿತಿ, ಆದಾಯ ತೆರಿಗೆ ವಿನಾಯಿತಿ, ವಿಮಾನ ಹಾಗೂ ರೈಲ್ವೆ ಟಿಕೆಟ್ ರಿಯಾಯಿತಿ ಮತ್ತು ಪೆÇೀಷಣಾ ಭತ್ಯೆ ಸೌಲಭ್ಯಗಳನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು ಎಂದು ಬೀದರ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಸುಭಾಷ್ ರತ್ನ ಹೇಳಿದರು.

ಬೀದರ್ ನಗರದ ನೆಹರೂ ಕ್ರೀಡಾಂಗಣದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ನಿಮಿತ್ತ ಆಯೋಜಿಸಲಾಗಿದ್ದ ಕ್ರೀಡೆ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹಿರಿಯ ನಾಗರಿಕರು ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಗೊಳಿಸಬೇಕು, ಇಲಾಖೆಯಿಂದ ಸಿಗುವ ಹಿರಿಯ ನಾಗರಿಕರ ಗುರುತಿನ ಚೀಟಿ, ವಿಮಾನ ಹಾಗೂ ರೈಲ್ವೆ ಟಿಕೆಟ್ ರಿಯಾಯಿತಿ, ಬಸ್ ಪಾಸ್, ಆದಾಯ ತೆರಿಗೆ ವಿನಾಯಿತಿ ಮತ್ತು ಪೆÇೀಷಣಾ ಭತ್ಯೆಯಂತಹ ಸೌಲಭ್ಯಗಳನ್ನು ಸೌಲಭ್ಯಾರ್ಥಿಗಳು ಬಳಸಿಕೊಳ್ಳಬೇಕು ಎಂದರು.

ಬೀದರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರಕಾಶ್ ಅವರು ಮಾತನಾಡಿ, ವಿಶ್ವ ಹಿರಿಯ ನಾಗರಿಕರ ದಿನಾಚರಣೆ ನಿಮಿತ್ತ ನಡೆದ ಸ್ಪರ್ಧೆಗಳಲ್ಲಿ ಭಾಗವಹಿಸಿದ ಹಿರಿಯ ನಾಗರಿಕರಿಗೆ ಸೂಕ್ತ ಗೌರವ ನೀಡಬೇಕು ಎಂದು ತಿಳಿಸಿದರು.

ಸ್ಪರ್ಧೆಯಲ್ಲಿ ಭಾಗವಹಿಸಿದ ಜಿಲ್ಲೆಯ ಹಿರಿಯ ನಾಗರಿಕರನ್ನು ಗೌರವದಿಂದ ನೋಡಿಕೊಳ್ಳಲು ಸೂಚಿಸಿದ ಅವರು, ಎಲ್ಲಾ ಹಿರಿಯ ನಾಗರಿಕರು ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಮುಖ್ಯವಾಹಿನಿಗೆ ತರಬೇಕು. ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳುವುದರ ಜೊತೆಗೆ ಕುಟುಂಬದ ಸದಸ್ಯರೊಂದಿಗೆ ಹೊಂದಿಕೊಂಡು ಮುನ್ನಡೆಯಬೇಕು ಎಂದು ಕಿವಿಮಾತು ಹೇಳಿದರು.

ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಯಶಸ್ವಿಯಾಗಿ ನೆರವೇರಿದವು. ಸ್ಪರ್ಧೆಗಳಲ್ಲಿ ವಿಜೇತರಾದ ಹಿರಿಯ ನಾಗರಿಕರಿಗೆ 2026ರ ಅಕ್ಟೋಬರ್ 1 ರಂದು ನಡೆಯಲಿರುವ ‘ವಿಶ್ವ ಹಿರಿಯ ನಾಗರಿಕರ ದಿನಾಚರಣೆ’ ಕಾರ್ಯಕ್ರಮದಲ್ಲಿ ಬಹುಮಾನ ಹಾಗೂ ಪ್ರಶಸ್ತಿಗಳನ್ನು ವಿತರಿಸಲಾಗುವುದು.

ಈ ಸಂದರ್ಭದಲ್ಲಿ ಬೀದರ ಮಾಧವನಗರದ ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರದ ಮುಖ್ಯಸ್ಥರಾದ ಸಂತೋಷ್ ಭಾಲ್ಕೆ, ಮಂಗಳಪೇಟೆಯ ಮದರ್ ತೆರೇಸಾ ವೃದ್ಧಾಶ್ರಮದ ಮುಖ್ಯಸ್ಥ ರವಿ ಜೋಸೆಫ್, ಡಾ. ಬಿ.ಆರ್. ಅಂಬೇಡ್ಕರ್ ಕಲ್ಚರಲ್ ಅಂಡ್ ವೆಲ್ಫೇರ್ ಸೊಸೈಟಿಯ ಮುಖ್ಯಸ್ಥ ಬಾಲಾಜಿ, ಔರಾದ್ ತಾಲೂಕಿನ ರಮಾಬಾಯಿ ಅಂಬೇಡ್ಕರ್ ವೃದ್ಧಾಶ್ರಮದ ಮುಖ್ಯಸ್ಥೆ ಶ್ರೀಮತಿ ಪಾರಮ್ಮ ವಾಗಮಾರೆ, ಭಾಲ್ಕಿಯ ವಿಶ್ವಶಾಂತಿ ವೃದ್ಧಾಶ್ರಮದ ಮುಖ್ಯಸ್ಥ ಜೈಪಾಲ್, ವೀರಭದ್ರಪ್ಪ ಉಪ್ಪಿನ, ಎಸ್.ಬಿ. ಕುಚಬಾಳ ಹಾಗೂ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಕಚೇರಿಯ ಸಿಬ್ಬಂದಿ ಹಾಜರಿದ್ದರು. ಶ್ರೀ ಮೈಕಲ್ ಕಾರ್ಯಕ್ರಮ ನಿರೂಪಿಸಿದರು.