Home ಜಿಲ್ಲೆ ಕಲಬುರಗಿ ಕೃಷಿ ಆಧಾರಿತ ಉದ್ಯೋಗ ಸೃಷ್ಟಿ ಇಂದಿನ ಅಗತ್ಯ: ಶೇಷಮೂರ್ತಿ ಅವಧಾನಿ

ಕೃಷಿ ಆಧಾರಿತ ಉದ್ಯೋಗ ಸೃಷ್ಟಿ ಇಂದಿನ ಅಗತ್ಯ: ಶೇಷಮೂರ್ತಿ ಅವಧಾನಿ

ಕಲಬುರಗಿ,ಏ.1-ಇಂದು ಪರಿಸರ ರಕ್ಷಣೆ, ಪರಿಸರ ಪೆÇೀಷಣೆ ಎಲ್ಲರ ಜವಾಬ್ದಾರಿಯಾಗಬೇಕಿದೆ. ಕೃಷಿ ಆಧಾರಿತ ಉದ್ಯೋಗ ಸೃಷ್ಟಿಯಾದರೆ ಮಾತ್ರ ಪರಿಸರ, ಪ್ರಕೃತಿ ಹಚ್ಚ ಹಸಿರಾಗಿರಲು ಸಾಧ್ಯ ಎಂದು ಹಿರಿಯ ಪತ್ರಕರ್ತ ಶೇಷಮೂರ್ತಿ ಅವಧಾನಿಯವರು ಹೇಳಿದರು.
ಕಲುಬುರಗಿ ತಾಲೂಕಿನ ಔರಾದ(ಬಿ) ಗ್ರಾಮದ ಶ್ರೀಸ್ವಾಮಿಸಮರ್ಥ ದೇವಸ್ಥಾನದ ಆವರಣದಲ್ಲಿ ನೂತನ ವಿದ್ಯಾಲಯ ಪದವಿ ಮಹಾವಿದ್ಯಾಲಯ, ಆಯ್.ಕ್ಯು.ಎ.ಸಿ. ಹಾಗೂ ಗುಲಬರ್ಗಾ ವಿಶ್ವವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆಯ ಕೋಶದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೃಷಿಯೇತರ ಜಮೀನು ಮುಂದಿನ ಯುವಪೀಳಿಗೆಯನ್ನು ಕತ್ತಲಲಿ ನೂಕುವ ಸಂಭವವಿದೆ. ಔದ್ಯೋಗಿಕರಣ ಪರಿಸರಕ್ಕೆ ಪೂರಕವಾಗಿದ್ದರೆ ಮಾತ್ರ ಸಮಾಜ ನೆಮ್ಮದಿಯಿಂದ ಇರಲು ಸಾಧ್ಯ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರಗಿಯ ಎನ್.ಎಸ್.ಎಸ್. ಕೋಶದ ಸಂಯೋಜನಾಧಿಕಾರಿ ಡಾ.ಎಚ್.ಎಸ್.ಜಂಗಯವರು ಮಾತನಾಡಿ, ಯುವಜನತೆ ಸ್ಥಿರ ಮಾದರಿ ಕಡೆ ವಾಲುತ್ತಿರುವುದು ದುರಂತ ಎಂದು ಕಳವಳ ವ್ಯಕ್ತಪಡಿಸುತ್ತಾ, ಯುವಜನತೆ ತಮ್ಮ ವ್ಯಕ್ತಿತ್ವ ರೂಪಿಸಿಕೊಳ್ಳುತ್ತ ದೇಶಕ್ಕೆ ಬೆನ್ನೆಲುಬಾಗುವ ಅವಶ್ಯಕತೆ ಇದೆ ಎಂದರು. ನೂತನ ವಿದ್ಯಾಲಯ ಪದವಿ ಮಹಾವಿದ್ಯಾಲಯದ ಉಪಪ್ರಾಚಾರ್ಯರಾದ ಡಾ. ಗುರುಮಧ್ವಾಚಾರ್ಯರವರು ಮಾತನಾಡಿದರು. ಅಧ್ಯಕ್ಷತೆಯನ್ನು ವಹಿಸಿದ್ದ ನೂತನ ವಿದ್ಯಾಲಯ ಸಂಸ್ಥೆಯ ಕಾಲೇಜು ಶೈಕ್ಷಣಿಕ ಮಂಡಳಿಯ ಸದಸ್ಯರು ಹಾಗೂ ನೂತನ ವಿದ್ಯಾಲಯ ಸಂಸ್ಥೆಯ ಮಾಜಿ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಗಿರೀಶ್ ಗಲಗಲಿಯವರು ಮಾತನಾಡಿ, ಶಿಬಿರಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆಯ ಮೂಲ ಧ್ಯೇಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು. ವೇದಿಕೆಯ ಮೇಲೆ ನೂತನ ವಿದ್ಯಾಲಯ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರು ಹಾಗೂ ಎನ್.ಎಸ್.ಎಸ್. ಅಧಿಕಾರಿಗಳಾದ ಡಾ. ದಯಾನಂದ ಎಂ. ಶಾಸ್ತ್ರಿ, ಪೆÇ್ರ.ಗುರುದತ್ತ ಪಿ. ಕುಲಕರ್ಣಿ, ಶ್ರೀಕಾಂತ್ ಪಂಡಿತ ಹಾಗೂ ಡಾ. ಮಲ್ಲಿನಾಥ ಎಸ್. ತಳವಾರ ಉಪಸ್ಥಿತರಿದ್ದರು.
ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದಲ್ಲಿ ಅರವತ್ತು ಶಿಬಿರಾರ್ಥಿಗಳು ಭಾಗವಹಿಸಿದ್ದರು. ಕುಮಾರಿ ಸ್ಪೂರ್ತಿ ಮತ್ತು ಕುಮಾರಿ ಪ್ರೀತಿ ಎನ್.ಎಸ್.ಎಸ್. ಗೀತೆ ಹಾಡಿದರು. ನೂತನ ವಿದ್ಯಾಲಯ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರು ಹಾಗೂ ಎನ್.ಎಸ್.ಎಸ್. ಅಧಿಕಾರಿಗಳಾದ ಡಾ. ದಯಾನಂದ ಎಂ. ಶಾಸ್ತ್ರಿಯವರು ಪ್ರಾಸ್ತಾವಿಕ ಹಾಗೂ ಸ್ವಾಗತ ಭಾಷಣ ಮಾಡಿದರು. ಡಾ. ಮಲ್ಲಿನಾಥ ಎಸ್. ತಳವಾರ ನಿರೂಪಿಸಿದರು. ಕುಮಾರಿ ಸೃಷ್ಟಿ ವಂದಿಸಿದರು.