
ಅಹಮದಾಬಾದ್,ಜೂ.೧೫-ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದವರಲ್ಲಿ ೩೧ ಜನರನ್ನು ಡಿಎನ್‌ಎ ಪರೀಕ್ಷೆಯ ಮೂಲಕ ಅಧಿಕಾರಿಗಳು ಗುರುತಿಸಿದ್ದಾರೆ ಮತ್ತು ೧೨ ಕುಟುಂಬಗಳು ಇದುವರೆಗೆ ಶವಗಳನ್ನು ಹಸ್ತಾಂತರಿಸಲಾಗಿದೆ ಎಂದು ಆರೋಗ್ಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಘಟನೆ ನಡೆದು ಮೂರು ದಿನಗಳಾದರೂ ಶವಗಳನ್ನು ಗುರುತಿಸುವ ಪ್ರಕ್ರಿಯೆ ಇನ್ನೂ ಮುಂದುವರೆದಿದೆ.
ಡಿಎನ್‌ಎ ಪರೀಕ್ಷೆಯ ಮೂಲಕ ಇದುವರೆಗೆ ೩೧ ಶವಗಳನ್ನು ಗುರುತಿಸಲಾಗಿದೆ ಗುರುತಿನ ಕಾರ್ಯವನ್ನು ಅತ್ಯಂತ ಸೂಕ್ಷ್ಮತೆ ಮತ್ತು ವೈಜ್ಞಾನಿಕ ವಿಧಾನಗಳೊಂದಿಗೆ ಮಾಡಲಾಗುತ್ತಿದೆ.
ಗುಜರಾತ್ ಸರ್ಕಾರ ಮೃತರ ಶವಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ.
ಮಾಹಿತಿಯ ಪ್ರಕಾರ, ಸುಮಾರು ಒಂದು ಸಾವಿರ ಜನರ ತಂಡವನ್ನು ಇದಕ್ಕಾಗಿ ಸಿದ್ಧಪಡಿಸಲಾಗಿದೆ. ಸರ್ಕಾರವು ಗುಜರಾತ್ ನ ವಿವಿಧ ಜಿಲ್ಲೆಗಳಿಂದ ಆಂಬ್ಯುಲೆನ್ಸ್ ಗಳನ್ನು ಕರೆಸಿದೆ. ಈ ಕೆಲಸಕ್ಕಾಗಿ ಒಟ್ಟು ೧೯೨ ಆಂಬ್ಯುಲೆನ್ಸ್ ಗಳನ್ನು ನಿಯೋಜಿಸಲಾಗಿದೆ.
ಆಂಬ್ಯುಲೆನ್ಸ್‌ನಲ್ಲಿ ಚಾಲಕ ಮತ್ತು ಸಹಾಯಕ ಸಿಬ್ಬಂದಿ ಇದ್ದಾರೆ. ಮೃತದೇಹಗಳನ್ನು ಸಂಬಂಧಿಕರ ಮನೆಗಳಿಗೆ ಸಾಗಿಸಲು ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ ಎಂದು ಸರ್ಕಾರ ಘೋಷಿಸಿದೆ. ಇಲ್ಲಿಯವರೆಗೆ, ೩೧ ಮೃತದೇಹಗಳಿಗೆ ಡಿಎನ್‌ಎ ಹೊಂದಾಣಿಕೆ ಮಾಡಲಾಗಿದೆ. ಅವುಗಳಲ್ಲಿ ೧೩ ಮೃತದೇಹಗಳನ್ನು ಅವರ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ.
ಅಹಮದಾಬಾದ್‌ನಿಂದ ಲಂಡನ್‌ಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನದ ಭೀಕರ ಅಪಘಾತದಲ್ಲಿ ೨೪೨ ಪ್ರಯಾಣಿಕರು ಮತ್ತು ಸಿಬ್ಬಂದಿಗಳಲ್ಲಿ ೨೪೧ ಮಂದಿ ಸಾವನ್ನಪ್ಪಿದ್ದಾರೆ. ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಸತ್ತವರಲ್ಲಿ ಸೇರಿದ್ದಾರೆ. ಈ ದುರಂತ ಅಪಘಾತದಲ್ಲಿ ಏಕೈಕ ಪ್ರಯಾಣಿಕ ಪವಾಡಸದೃಶವಾಗಿ ಬದುಕುಳಿದಿದ್ದಾರೆ.