Home ಜಿಲ್ಲೆ ಕಲಬುರಗಿ ಕಲಬುರಗಿ ಜಿಲ್ಲೆಯ ಎಲ್ಲ 11 ತಾಲೂಕು ಬರಪೀಡಿತ ಪಟ್ಟಿ ಸೇರ್ಪಡೆ: ಸಚಿವ ಡಾ. ಅಜಯ್‍ಸಿಂಗ್

ಕಲಬುರಗಿ ಜಿಲ್ಲೆಯ ಎಲ್ಲ 11 ತಾಲೂಕು ಬರಪೀಡಿತ ಪಟ್ಟಿ ಸೇರ್ಪಡೆ: ಸಚಿವ ಡಾ. ಅಜಯ್‍ಸಿಂಗ್

ಕಲಬುರಗಿ,ಸೆ 23: ರಾಜ್ಯ ಸರ್ಕಾರವು 3ನೇ ಹಂತದಲ್ಲಿ ಮತ್ತಷ್ಟು ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ಬರಪೀಡಿತ ತಾಲೂಕುಗಳ ಸಂಖ್ಯೆ 177 ಕ್ಕೆ ಏರಿಕೆ ಆಗಿದೆ. ಇದೀಗ ಕಲಬುರಗಿ ಜಿಲ್ಲೆಯ ಜೇವರ್ಗಿ, ಯಡ್ರಾಮಿ ಸೇರಿದಂತೆ ಎಲ್ಲಾ 11 ತಾಲೂಕುಗಳು ಬರ ಪೀಡಿತ ತಾಲೂಕು ಪಟ್ಟಿ ಸೇರಿವೆ ಎಂದು ಸಣ್ಣ ನೀರಾವರಿ, ವಿಜ್ಞಾನ, ತಂತ್ರಜ್ಞಾನ ಖಾತೆ ಸಚಿವ ಡಾ. ಅಜಯ್ ಧರ್ಮಸಿಂಗ್ ಹೇಳಿದ್ದಾರೆ.
ಈ ಕುರಿತಂತೆ ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯ್ ಧರ್ಮಸಿಂಗ್, ಕಾಂಗ್ರೆಸ್ ಸರ್ಕಾರ ರೈತರ, ಜನಪರ ನಿಲುವಿಗೆ ಸದಾ ಬದ್ಧವಾಗಿದೆ. ನಾವು ಹಾಗೂ ನಮ್ಮ ಸರ್ಕಾರ ಬರಗಾಲ ಘೋಷಣೆ ಹಾಗೂ ಪರಿಹಾರಕ್ಕೆ ಬದ್ಧ ಎಂದಿದ್ದಾರೆ.
ಮುಂಗಾರು ಹಂಗಾಮು ಮುಗಿಯುವವರೆಗೂ ಬರ ಪರಿಸ್ಥಿತಿಯ ಮೇಲ್ವಿಚಾರಣೆ ಮುಂದುವರಿಯಲಿದ್ದು, ಅಗತ್ಯ ಕಂಡುಬಂದಲ್ಲಿ ಮುಂದಿನ ಹಂತದಲ್ಲಿಯೂ ಹೆಚ್ಚುವರಿ ತಾಲೂಕುಗಳನ್ನು ಗ್ರೌಂಡ್ ಟ್ರೂಥಿಂಗ್‍ಗೆ ಸೇರಿಸಲಾಗುವುದು. ಬೆಳೆ ಹಾನಿಯ ನೈಜ ಚಿತ್ರಣ ಆಧರಿಸಿ, ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ನಿಯಮಾನುಸಾರ ಅಗತ್ಯ ನೆರವು ತಲುಪಿಸಲು ನಾವು ಬದ್ಧರಿದ್ದೇವೆ ಎಂದು ಅವರು ಹೇಳಿದ್ದಾರೆ.
ಬರ ಘೋಷಣೆಗೆ ಸೆಪ್ಟೆಂಬರ್ 30ರವರೆಗೆ ಕಾಲಾವಕಾಶವಿದ್ದು, ಅಷ್ಟರೊಳಗೆ ರಾಜ್ಯದ ಸುಮಾರು 180ರಿಂದ 200 ತಾಲೂಕುಗಳು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಯಾಗುವ ನಿರೀಕ್ಷೆಯಿದೆ. ಬರದಿಂದ ಸಂಕಷ್ಟಕ್ಕೊಳಗಾದ ರೈತರು ಹಾಗೂ ಜನರ ನೆರವಿಗೆ ನಮ್ಮ ಸರ್ಕಾರ ಸದಾ ಬದ್ಧವಾಗಿದೆ.
ಕಲಬುರಗಿ ಜಿಲ್ಲೆಯ ಎಲ್ಲಾ 11 ತಾಲೂಕುಗಳನ್ನು ಈಗ ಅಧಿಕೃತವಾಗಿ ರಾಜ್ಯ ಸರ್ಕಾರವು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಿದೆ. ಸರ್ಕಾರವು ಹಂತ ಹಂತವಾಗಿ ನಡೆಸಿದ ಜಂಟಿ ಸಮೀಕ್ಷೆ ಹಾಗೂ ಮೌಲ್ಯಮಾಪನದ ನಂತರ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ‘ತೀವ್ರ ಬರಪೀಡಿತ’ ಎಂದು ಘೋಷಿಸಿದೆ.
ತಳಮಟ್ಟದ ಸಮೀಕ್ಷೆ ಪೂರ್ಣಗೊಂಡ ನಂತರ ಅಫಜಲಪುರ, ಆಳಂದ, ಚಿತ್ತಾಪುರ, ಕಲಬುರಗಿ, ಯಡ್ರಾಮಿ, ಶಹಾಬಾದ್ ಹಾಗೂ 3 ನೇ ಹಂತದಲ್ಲಿ ಜಿಲ್ಲೆಯ ಚಿಂಚೋಳಿ, ಜೇವರ್ಗಿ, ಕಾಳಗಿ, ಕಮಲಾಪುರ, ಸೇಡಂ 5 ತಾಲೂಕುಗಳು ಸರಿದಂತೆ ಒಟ್ಟು 11 ಜಿಲ್ಲೆಯ ತಾಲೂಕುಗಳನ್ನು ‘ತೀವ್ರ ಬರಪೀಡಿತ’ ಪಟ್ಟಿಗೆ ಸೇರ್ಪಡೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಬೆಳೆಹಾನಿ ಸಮೀಕ್ಷೆಗೆ ಒತ್ತು ಕೊಡಲಾಗುತ್ತಿದೆ. ಎಂದು ಸಚಿವರಾದ ಡಾ. ಅಜಯ್ ಸಿಂಗ್ ಹೇಳಿದ್ದಾರೆ..
ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯನ್ನು ನಿರಂತರವಾಗಿ ವೈಜ್ಞಾನಿಕವಾಗಿ ಮೌಲ್ಯಮಾಪನ ನಡೆಸಲಾಗುತ್ತಿದ್ದು, ರೈತರ ಸಂಕಷ್ಟಕ್ಕೆ ತ್ವರಿತವಾಗಿ ಸ್ಪಂದಿಸುವ ನಿಟ್ಟಿನಲ್ಲಿ ಹಂತ ಹಂತವಾಗಿ ಕ್ರಮ ಕೈಗೊಳ್ಳುತ್ತಿದ್ದೇವೆವೆಂದು ಸಚಿವರಾದ ಡಾ. ಅಜಯ್ ಧರ್ಮಸಿಂಗ್ ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ ಸರ್ಕಾರವು ರಾಜ್ಯದ ಬರಗಾಲ ಪರಿಸ್ಥಿತಿಯನ್ನು ಎದುರಿಸಲು ಮತ್ತು ಸಂತ್ರಸ್ತರಿಗೆ ಅಗತ್ಯ ನೆರವು ನೀಡಲು ಸಂಪೂರ್ಣ ಬದ್ಧವಾಗಿದೆ. ರಾಜ್ಯದ ರೈತರು ಮತ್ತು ಸಾರ್ವಜನಿಕರ ಹಿತರಕ್ಷಣೆಗಾಗಿ ಸರ್ಕಾರವು ಹಲವು ಪ್ರಮುಖ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದೂ ಸಚಿವ ಡಾ. ಅಜಯ್ ಸಿಂಗ್ ರೈತರಿಗೆ ಅಭಯ ನೀಡಿದ್ದಾರೆ.