
ಕಲಬುರಗಿ,ಆ.೦೨:ಮಾನವ ಕಳ್ಳ ಸಾಗಾಣಿಕೆ ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುವ ಅಮಾನವೀಯ ಅಪರಾಧವಾಗಿದ್ದು, ಇದನ್ನು ತಡೆಗಟ್ಟಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕಾದ ಅಗತ್ಯವಿದೆ ಎಂದು ಕಲಬುರಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀನಿವಾಸ ನವಲೆ ಅವರು ಹೇಳಿದರು.
ಅವರು ಇತ್ತೀಚೆಗೆ ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಹಾಗೂ ವಿವಿಧ ಸ್ವಯಂ ಸೇವಾ ಸಂಸ್ಥೆಗಳು ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಕಲಬುರಗಿ ಸರಕಾರಿ ಬಾಲಕಿಯರ ಬಾಲಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ “ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ”ಯನ್ನು ಉದ್ಘಾಟಿಸಿ ಮಾತನಾಡಿ, ಮಹಿಳೆಯರು, ಮಕ್ಕಳು ಹಾಗೂ ದುರ್ಬಲ ವರ್ಗದ ಜನರನ್ನು ಮಾನವ ಕಳ್ಳಸಾಗಾಣಿಕೆಯಿಂದ ರಕ್ಷಿಸುವುದು ಪ್ರತಿಯೊಬ್ಬರ ಸಾಮಾಜಿಕ ಹಾಗೂ ಕಾನೂನುಬದ್ಧ ಜವಾಬ್ದಾರಿಯಾಗಿದೆ. ಪ್ರಕರಣಗಳನ್ನು ತ್ವರಿತವಾಗಿ ಗುರುತಿಸಿ ಸಂತ್ರಸ್ತರಿಗೆ ಸೂಕ್ತ ರಕ್ಷಣೆ, ಕಾನೂನು ನೆರವು ಹಾಗೂ ಪುನರ್ವಸತಿ ಕಲ್ಪಿಸುವಲ್ಲಿ ಸಂಬAಧಪಟ್ಟ ಇಲಾಖೆಗಳು ಹೆಚ್ಚಿನ ಜಾಗೃತಿಯಿಂದ ಕಾರ್ಯನಿರ್ವಹಿಸಬೇಕೆಂದು ಅವರು ಕರೆ ನೀಡಿದರು.
ಸಂಪನ್ಮೂಲ ವ್ಯಕ್ತಿಗಳಾದ ಕಲಬುರಗಿ ನಗರ ಮಹಿಳಾ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರಾದ ಅಕ್ಕಮಹಾದೇವಿ ಅವರು ಮಾತನಾಡಿ, ಮಾನವ ಕಳ್ಳ ಸಾಗಾಣಿಕೆ ಪ್ರಕರಣಗಳನ್ನು ತಡೆಗಟ್ಟುವಲ್ಲಿ ಪೊಲೀಸ್ ಇಲಾಖೆ, ವಿವಿಧ ಸರ್ಕಾರಿ ಇಲಾಖೆಗಳು ಹಾಗೂ ಸಾರ್ವಜನಿಕರ ಸಹಕಾರ ಅತ್ಯಂತ ಅವಶ್ಯಕವಾಗಿದೆ. ಮಹಿಳೆಯರು ಮತ್ತು ಮಕ್ಕಳನ್ನು ಗುರಿಯಾಗಿಸಿಕೊಂಡು ನಡೆಯುವ ಕಳ್ಳಸಾಗಾಣಿಕೆ, ಬಲವಂತದ ದುಡಿಮೆ, ಲೈಂಗಿಕ ಶೋಷಣೆ ಹಾಗೂ ಇತರೆ ದೌರ್ಜನ್ಯಗಳ ವಿರುದ್ಧ ಪ್ರತಿಯೊಬ್ಬರೂ ಜಾಗೃತರಾಗಿರಬೇಕು. ಅನುಮಾನಾಸ್ಪದ ಚಟುವಟಿಕೆಗಳು ಕಂಡುಬAದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ-೧೦೯೮, ಮಹಿಳೆಯರ ಸಮಸ್ಯೆಗಳಿಗೆ ೧೧೨ ಮಹಿಳಾ ಸಹಾಯವಾಣಿಗೆ ತಕ್ಷಣವೇ ಕರೆ ಮಾಡಿ ಪೊಲೀಸ್ ಇಲಾಖೆ ಹಾಗೂ ಸಂಬAಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡುವ ಮೂಲಕ ಅಪರಾಧಗಳನ್ನು ತಡೆಗಟ್ಟಲು ಸಹಕರಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಅತಿಥಿಯಾಗಿ ಆಗಮಿಸಿ ಮಾತನಾಡಿದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುಳಾ ಪಾಟೀಲ್ ಅವರು, ಮಾನವ ಕಳ್ಳಸಾಗಾಣಿಕೆ ಪ್ರಕರಣಗಳಲ್ಲಿ ಹೆಚ್ಚಾಗಿ ಹೆಣ್ಣು ಮಕ್ಕಳೇ ಇದಕ್ಕೆ ಬಲಿಯಾಗುತ್ತಿದ್ದಾರೆ. ಆದ್ದರಿಂದ ಬೇರೆ ರಾಜ್ಯಗಳಿಗೆ ದುಡಿಯಲು ಹೋದ ಹೆಣ್ಣು ಮಕ್ಕಳು ಹೆಚ್ಚಾಗಿ ಸಾಗಾಣಿಕೆಗೆ ಒಳಪಡುತ್ತಿರುವುದು ಕಂಡು ಬಂದಿದ್ದು, ಆದ್ದರಿಂದ ನಮ್ಮ ಮನೆಯಲ್ಲಿ ನಮ್ಮ ಹೆಣ್ಣು ಮಕ್ಕಳು ಆಗಲಿ ಬೇರೆ ರಾಜ್ಯಕ್ಕೆ ದುಡಿಯಲು ಕಳುಹಿಸುತ್ತಿರುವ ಹೆಣ್ಣು ಮಕ್ಕಳು ಅತ್ಯಂತ ಜಾಗೃತರಾಗುವಂತೆ ಅವರಿಗೆ ತಿಳಿಸುವುದು ಅತ್ಯಂತ ಮುಖ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಪ್ರ‍್ರಾಸ್ತಾವಿಕ ಮಾತನಾಡಿದ ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರ ಕಚೇರಿಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ಶಿವಶರಣಪ್ಪಾ ಅವರು ಮಾತನಾಡಿ, ಗ್ರಾಮ ಮತ್ತು ವಾರ್ಡ್ ಮಟ್ಟದಲ್ಲಿ ರಚಿಸಲಾದ ಕಾವಲು ಸಮಿತಿಗಳು ಬಾಲ್ಯವಿವಾಹ ತಡೆ, ಮಕ್ಕಳ ಸುರಕ್ಷತೆ, ಶಾಲೆಯಿಂದ ಹೊರಗುಳಿದ ಮಕ್ಕಳ ಗುರುತಿಸುವಿಕೆ ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಗ್ರಾಮ ಮಟ್ಟದ ಕಾವಲು ಸಮಿತಿಗಳಲ್ಲಿ ಮಾನವ ಕಳ್ಳ ಸಾಗಾಣಿಕೆ, ಪೋಕ್ಸೊ, ಬಾಲ್ಯವಿವಾಹ ಕುರಿತು ಜನ ಸಾಮಾನ್ಯರಲ್ಲಿ ಅರಿವು ಮೂಡಿಸಬೇಕು. ಮಕ್ಕಳನ್ನು ಯಾವುದೇ ರೀತಿಯ ಲೈಂಗಿಕ ದೌರ್ಜನ್ಯದಿಂದ ರಕ್ಷಿಸಲು ಪೋಕ್ಸೊ (PಔಅSಔ) ಕಾಯ್ದೆಯ ಕುರಿತು ಪಾಲಕರು, ಶಿಕ್ಷಕರು ಹಾಗೂ ಸಾರ್ವಜನಿಕರು ಸಮರ್ಪಕ ಅರಿವು ಹೊಂದಿರಬೇಕು ಎಂದು ತಿಳಿಸಿದರು.
ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕ ರಾಜಕುಮಾರ ರಾಠೋಡ ಅವರು ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶನದಂತೆ ಪ್ರತಿ ವರ್ಷ ಜುಲೈ ೩೦ರಂದು ವಿಶ್ವಸಂಸ್ಥೆಯ ನೇತೃತ್ವದಲ್ಲಿ “ವಿಶ್ವ ಮಾನವ ಕಳ್ಳಸಾಗಾಣಿಕೆ ತಡೆ ದಿನಾಚರಣೆ”ಯನ್ನು ಆಚರಿಸಲಾಗುತ್ತಿದೆ. ಮಾನವ ಕಳ್ಳಸಾಗಾಣಿಕೆ ಎಂಬುದು ಸಮಾಜಕ್ಕೆ ಮಾರಕವಾದ ಸಂಘಟಿತ ಅಪರಾಧವಾಗಿದ್ದು, ಮಹಿಳೆಯರು, ಮಕ್ಕಳು ಹಾಗೂ ದುರ್ಬಲ ವರ್ಗದ ಜನರು ಇದರ ಪ್ರಮುಖ ಬಲಿಪಶುಗಳಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು, ಸಿಬ್ಬಂದಿ ಹಾಗೂ ಕ್ಷೇತ್ರಮಟ್ಟದ ಕಾರ್ಯಕರ್ತರಲ್ಲಿ ಜಾಗೃತಿ ಮೂಡಿಸುವುದು, ಮಾನವ ಕಳ್ಳ ಸಾಗಾಣಿಕೆಯನ್ನು ತಡೆಗಟ್ಟುವುದು, ಸಂತ್ರಸ್ತರ ಹಕ್ಕುಗಳನ್ನು ರಕ್ಷಿಸುವುದು, ಹಾಗೂ ಈ ಅಪರಾಧವನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಲು ಸರ್ಕಾರ, ಆಡಳಿತ, ಸ್ವಯಂ ಸೇವಾ ಸಂಸ್ಥೆಗಳು ಮತ್ತು ನಾಗರೀಕರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವಂತೆ ಪ್ರೇರೆಪಿಸುವುದೇ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.
ಕಲಬುರಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ವಿಶ್ವರಾಧ್ಯ ಕೆ ಇಜೇರಿ ಅವರು ಮಾತನಾಡಿ, ಮಕ್ಕಳ ಶಿಕ್ಷಣ, ಸುರಕ್ಷತೆ ಮತ್ತು ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಮಕ್ಕಳನ್ನು ಬಾಲಕಾರ್ಮಿಕ ಪದ್ಧತಿ, ಬಾಲ್ಯ ವಿವಾಹ ಹಾಗೂ ಕಳ್ಳಸಾಗಾಣಿಕೆಯಂತಹ ದುಷ್ಕೃತ್ಯಗಳಿಂದ ರಕ್ಷಿಸಲು ಸಮಾಜದ ಎಲ್ಲ ವರ್ಗದವರು ಕೈಜೋಡಿಸಬೇಕು. ಇಂತಹ ಜಾಗೃತಿ ಕಾರ್ಯಕ್ರಮಗಳು ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿ ನಡೆಯುವುದರಿಂದ ಮಾನವ ಕಳ್ಳಸಾಗಾಣಿಕೆ ತಡೆಗಟ್ಟಲು ಪರಿಣಾಮಕಾರಿಯಾಗಲಿವೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ದಿ ಯೋಜನಾಧಿಕಾರಿ ಮಲ್ಲಣ್ಣ ದೇಸಾಯಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಅಫಜಲಪೂರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಪ್ರೇಮಾನಂದ ಚಿಂಚೋಳಕರ, ಆಳಂದ ಶಿಶು ಅಭಿವೃದ್ದಿ ಯೋಜನಾಧಿಕಾರಿ ಶಂಭುಲಿAಗ ಹೀರೆಮಠ, ಕಲಬುರಗಿ ಸರಕಾರಿ ಬಾಲಕಿಯರ ಬಾಲಮಂದಿರ ಅಧೀಕ್ಷಕ ಮಹಾನಂದ, ಸಹಾಯಕ ಶಿಶು ಅಭಿವೃದ್ದಿ ಯೋಜನಾಧಿಕಾರಿ ಭೀಮಾಬಾಯಿ, ಕಲಬುರಗಿ (ನಗರ) ಸಂರಕ್ಷಣಾಧಿಕಾರಿ ಅಂಬಿಕಾ ಓಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಿಬ್ಬಂದಿಗಳು, ಮಾರ್ಗದರ್ಶಿ ಸಂಸ್ಥೆ, ಡಾನ ಬಾಸ್ಕೋ ಸಂಸ್ಥೆ ಸಿಬ್ಬಂಧಿಗಳು, ಇನ್ನಿತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಾರಂಭದಲ್ಲಿ ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕ ರಾಜಕುಮಾರ ರಾಠೋಡ ಅವರು ಸ್ವಾಗತಿಸಿದರು. ಕಾನೂನು ಮತ್ತು ಪರಿವೀಕ್ಷಣಾ ಅಧಿಕಾರಿ ಭರತೇಶ ಶೀಲವಂತರು ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ಕಲಬುರಗಿ ಸರಕಾರಿ ಬಾಲಕರ ಬಾಲಮಂದಿರದ ಸಮಾಲೋಚಕ ವಿಠ್ಠÀಲ ವಂದಿಸಿದರು.
ಕಾರ್ಯಕ್ರಮದಲ್ಲಿ ಕಲಬುರಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ ಎಲ್ಲರಿಗೂ ಮಾನವ ಕಳ್ಳ ಸಾಗಾಣಿಕೆ ತಡೆ ಕುರಿತು ಪ್ರತಿಜ್ಞಾ ವಿಧಿ ಭೋದಿಸಿದರು. ಇದೇ ಸಂದರ್ಭದಲ್ಲಿ ಕಲಬುರಗಿ ಮಾರ್ಗದರ್ಶಿ ಸ್ವಯಂ ಸೇವಾ ಸಂಸ್ಥೆಯಿAದ ಬಾಲ್ಯವಿವಾಹ, ಪೋಕ್ಸೊ, ಬ್ರೋಚರ್ಸಗಳನ್ನು ಬಿಡುಗಡೆಗೊಳಿಸಲಾಯಿತು.






























