
ಕಲಬುರಗಿ,ಜು.6: ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಾರ್ಮಿಕರ ವಿರೋಧಿ ನೀತಿಗಳ ವಿರುದ್ಧ ಜುಲೈ 9 ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ರಾಜ್ಯದಲ್ಲಿಯೂ ಕಲಬುರಗಿ ಒಳಗೊಂಡು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮತ್ತು ಕೈಗಾರಿಕೆ ಮುಷ್ಕರ ನಡೆಯಲಿದೆ ಎಂದು ಎಐಟಿಯುಸಿ ಜಿಲ್ಲಾ ಕಾರ್ಯದರ್ಶಿ ಪ್ರಭುದೇವ ಯಳಸಂಗಿ ತಿಳಿಸಿದ್ದಾರೆ.ಅಂದು ಬೆಳಿಗ್ಗೆ 11.30ಕ್ಕೆ ನಗರದ ಸರದಾರ ವಲ್ಲಭಭಾಯಿ ಪಟೇಲ್ ವೃತ್ತದಿಂದ ವೃತ್ತದಿಂದ ಮಿನಿ ವಿಧಾನಸೌಧದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ.
ರಾಜ್ಯದಲ್ಲಿ ಎರಡು ವರ್ಷದ ಹಿಂದೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಒಂದಾದ ಮೇಲೊಂದರಂತೆ ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೊಳಿಸಲು ಮುಂದಾಗಿದೆ. ಎಂಟು ಗಂಟೆಗಳ ದುಡಿತದ ಅವಧಿಯನ್ನು 12 ಗಂಟೆಗಳಿಗೆ ಹೆಚ್ಚಿಸಲು ತಯಾರಿ ನಡೆಸಿದೆ. ಮೂರನೇ ಅವಧಿಗೆ ಅಧಿಕಾರಕ್ಕೆ ಬಂದಿರುವ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ದುಡಿಯುವ ಜನರ ಹಕ್ಕುಗಳನ್ನು ಕಸಿಯುತ್ತಿದೆ. ಈ ಪರಿಸ್ಥಿತಿಗಳನ್ನು ಸುಧಾರಿಸಬೇಕಾದಂತಹ ಸರ್ಕಾರ ತದ್ವಿರುದ್ಧವಾಗಿ 4 ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತರುವ ಮೂಲಕ ಇವುಗಳನ್ನು ದುಡಿಯುವ ಜನರ ಮೇಲೆ ಒತ್ತಾಯ ಪೂರ್ವಕವಾಗಿ ಹೇರುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಶಂಕರಕಟ್ಟಿ ಸಂಗಾವಿ,ಎಸ್.ಎಂ ಶರ್ಮಾ,ಅಶೋಕ ಘೂಳಿ,ಸಿದ್ದಪ್ಪ ಪಾಲ್ಕಿ,ಹಣಮಂತರಾಯ ಅಟ್ಟೂರ ಮತ್ತಿತರಿದ್ದರು