Home ಜಿಲ್ಲೆ ‘ವಂದೇ ಮಾತರಂ’ಗೆ ಅಗೌರವ ಆರೋಪ: ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ

‘ವಂದೇ ಮಾತರಂ’ಗೆ ಅಗೌರವ ಆರೋಪ: ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ

ಬೀದರ್: ‘ವಂದೇ ಮಾತರಂ’ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಭಾನುವಾರ ಬೀದರ್‍ನ ಕಾಂಗ್ರೆಸ್ ಪಕ್ಷದ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರಾದರೂ, ಪೆÇಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಬಂದೋಬಸ್ತ್ ಕೈಗೊಂಡಿದ್ದರಿಂದ ಮುತ್ತಿಗೆ ಯತ್ನವನ್ನು ತಡೆದರು.

ಪ್ರತಿಭಟನೆಯಲ್ಲಿ ಬಿಜೆಪಿ ನಗರ ಅಧ್ಯಕ್ಷ ಹಾಗೂ ನಗರಸಭೆ ಸದಸ್ಯ ಶಶಿ ಹೊಸಳ್ಳಿ ಮಾತನಾಡಿ, ‘ವಂದೇ ಮಾತರಂ’ ಕೇವಲ ಒಂದು ಗೀತೆಯಲ್ಲ. ದೇಶದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಕೋಟ್ಯಂತರ ಭಾರತೀಯರಲ್ಲಿ ರಾಷ್ಟ್ರಭಕ್ತಿ ಮತ್ತು ದೇಶಾಭಿಮಾನದ ಭಾವನೆ ಮೂಡಿಸಿದ ಮಹತ್ವದ ರಾಷ್ಟ್ರೀಯ ಗೀತೆಯಾಗಿದೆ. ಇಂತಹ ಗೀತೆಗೆ ಅಗೌರವ ತೋರುವ ಯಾವುದೇ ಪ್ರಯತ್ನವನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದರು.

‘ವಂದೇ ಮಾತರಂ’ ಹಾಡುತ್ತಿದ್ದ ಸಂದರ್ಭದಲ್ಲಿ ಕೈ ಸನ್ನೆ ಮೂಲಕ ಅದನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಘಟನೆ ದೇಶದ ಪ್ರತಿಯೊಬ್ಬ ದೇಶಭಕ್ತನ ಭಾವನೆಗಳಿಗೆ ನೋವುಂಟು ಮಾಡಿದೆ. ಈ ಕುರಿತು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಸ್ಪಷ್ಟನೆ ನೀಡಬೇಕು ಎಂದು ಶಶಿ ಹೊಸಳ್ಳಿ ಆಗ್ರಹಿಸಿದರು.

ದೇಶದ ಸಂಸ್ಕøತಿ, ಸಂಪ್ರದಾಯ, ಸ್ವಾತಂತ್ರ್ಯ ಹೋರಾಟದ ಇತಿಹಾಸ ಹಾಗೂ ರಾಷ್ಟ್ರಭಾವನೆಗೆ ಪ್ರತಿಯೊಬ್ಬರೂ ಗೌರವ ನೀಡಬೇಕು. ರಾಜಕೀಯ ಭಿನ್ನಾಭಿಪ್ರಾಯಗಳು ಏನೇ ಇದ್ದರೂ ರಾಷ್ಟ್ರಗೀತೆ, ರಾಷ್ಟ್ರಧ್ವಜ ಹಾಗೂ ದೇಶದ ರಾಷ್ಟ್ರೀಯ ಭಾವನೆಗಳಿಗೆ ಧಕ್ಕೆ ತರುವ ರೀತಿಯ ವರ್ತನೆ ಇರಬಾರದು ಎಂದು ಅವರು ಹೇಳಿದರು.

ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ಸಂತೋಷ ರೆಡ್ಡಿ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ಅನೇಕ ಹಿರಿಯ ಹಾಗೂ ಅನುಭವೀ ನಾಯಕರು ಇದ್ದಾರೆ. ಈ ವಿಚಾರವನ್ನು ಪಕ್ಷದ ಹಿರಿಯ ನಾಯಕರು ಗಂಭೀರವಾಗಿ ಪರಿಗಣಿಸಿ, ಇಂತಹ ಘಟನೆಗಳು ಮರುಕಳಿಸದಂತೆ ತಮ್ಮ ಪಕ್ಷದ ನಾಯಕರಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು.

ತಪ್ಪು ನಡೆದಿದ್ದರೆ ಸಂಬಂಧಪಟ್ಟವರ ವಿರುದ್ಧ ಪಕ್ಷದ ಮಟ್ಟದಲ್ಲಿ ಕ್ರಮ ಕೈಗೊಳ್ಳಬೇಕು. ‘ವಂದೇ ಮಾತರಂ’ಗೆ ಅಗೌರವ ತೋರಿಸುವುದು ಸಣ್ಣ ವಿಚಾರವಲ್ಲ. ಇದು ದೇಶದ ಸ್ವಾಭಿಮಾನ ಮತ್ತು ರಾಷ್ಟ್ರೀಯ ಭಾವನೆಗೆ ಸಂಬಂಧಿಸಿದ ವಿಷಯವಾಗಿದೆ. ರಾಜಕೀಯ ಲಾಭಕ್ಕಾಗಿ ರಾಷ್ಟ್ರೀಯ ಭಾವನೆಗಳಿಗೆ ಧಕ್ಕೆ ತರುವಂತಹ ಹೇಳಿಕೆಗಳು ಅಥವಾ ಕೃತ್ಯಗಳನ್ನು ಯಾರೂ ಮಾಡಬಾರದು ಎಂದು ಸಂತೋಷ ರೆಡ್ಡಿ ಹೇಳಿದರು.

‘ವಂದೇ ಮಾತರಂ’ಗೆ ಅಗೌರವ ತೋರಿಸಲಾಗಿದೆ ಎಂಬ ಆರೋಪದ ಕುರಿತು ಕಾಂಗ್ರೆಸ್ ಪಕ್ಷ ಸ್ಪಷ್ಟನೆ ನೀಡಬೇಕು. ಘಟನೆಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ರಾಷ್ಟ್ರೀಯ ಭಾವನೆಗಳಿಗೆ ಧಕ್ಕೆ ತರುವ ಘಟನೆಗಳು ಮರುಕಳಿಸದಂತೆ ಕ್ರಮ ವಹಿಸಬೇಕು. ದೇಶದ ಸಂಸ್ಕೃತಿ, ಸ್ವಾತಂತ್ರ್ಯ ಹೋರಾಟದ ಪರಂಪರೆ ಹಾಗೂ ರಾಷ್ಟ್ರಭಕ್ತಿಗೆ ಎಲ್ಲ ರಾಜಕೀಯ ಪಕ್ಷಗಳು ಗೌರವ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯ ವೇಳೆ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ‘ವಂದೇ ಮಾತರಂ’ ಹಾಗೂ ರಾಷ್ಟ್ರಭಕ್ತಿಗೆ ಗೌರವ ನೀಡಬೇಕು ಎಂದು ಆಗ್ರಹಿಸಿದರು. ಪೆÇಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳದಲ್ಲಿ ಬಂದೋಬಸ್ತ್ ಕಲ್ಪಿಸಿದ್ದರು.

ಪ್ರತಿಭಟನೆಯಲ್ಲಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ವೀರೇಶ ಸ್ವಾಮಿ, ರಮೇಶ ಕಲ್ಲೂರ, ದೀಪಕ ಗಾದಗಿ, ರಾಜೇಂದ್ರ ಪೂಜಾರಿ, ಗಣೇಶ್ ಭೋಸ್ಲೆ, ರೋಷನ್ ವರ್ಮಾ, ನಿತಿನ್ ನವಲಕಲೆ, ನರೇಶ್ ಗೌಳಿ, ಸಚಿನ ಮಠಪತಿ, ಶರಣು ಸಿದ್ದವೀರ, ವೀರೇಂದ್ರ ಪಾಟೀಲ, ಬಾಲಾಜಿ ಪಾಟೀಲ, ಸತೀಶ ಶೇಟಗೊಂಡ, ಶಿವು ಸುಲ್ತಾಪುರೆ, ಸಾಯಿನಾಥ ಮಂಗಲಗಿ, ಬಸವ ಮೂಲಗೆ, ಗುರು ಪಂಪಡೇ, ಸಂಜು ಜಿರಗೆ ಹಾಗೂ ರೋಹಿತ್ ಮಂಗಲಗಿ ಸೇರಿದಂತೆ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.