Home ಕ್ರೈಂ ಸುದ್ದಿಗಳು ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ಆರೋಪ: ವಾಹನ ಸಮೇತ 165 ಕ್ವಿಂಟಾಲ್ ಅಕ್ಕಿ ಜಪ್ತಿ

ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ಆರೋಪ: ವಾಹನ ಸಮೇತ 165 ಕ್ವಿಂಟಾಲ್ ಅಕ್ಕಿ ಜಪ್ತಿ

ಸುರಪುರ: ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಆಹಾರ ಇಲಾಖೆ ಹಾಗೂ ಪೆÇಲೀಸ್ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿ, ಲಾರಿ ಸಮೇತ 165 ಕ್ವಿಂಟಾಲ್ ಅಕ್ಕಿಯನ್ನು ವಶಕ್ಕೆ ಪಡೆದಿರುವ ಘಟನೆ ಸುರಪುರ ನಗರದಲ್ಲಿ ನಡೆದಿದೆ.

ಸುರಪುರ ತಾಲೂಕಿನ ಕಕ್ಕೇರಾದಿಂದ ಕಲಬುರಗಿಯತ್ತ ಅನ್ನಭಾಗ್ಯ ಅಕ್ಕಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಆಧರಿಸಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಸುಮಾರು ?3.80 ಲಕ್ಷ ಮೌಲ್ಯದ 165 ಕ್ವಿಂಟಾಲ್ ಅಕ್ಕಿ ಹಾಗೂ ಸಾಗಾಟಕ್ಕೆ ಬಳಸಲಾಗಿದೆ ಎನ್ನಲಾದ ವಾಹನವನ್ನು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾರ್ವಜನಿಕರಿಂದ ಕಡಿಮೆ ಬೆಲೆಗೆ ಅನ್ನಭಾಗ್ಯ ಅಕ್ಕಿಯನ್ನು ಖರೀದಿಸಿ, ಅದನ್ನು ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಸಾಗಿಸಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ವಾಹನ ಚಾಲಕ ಸಿದ್ರಾಪ್ಪ ಎಂಬಾತನ ವಿರುದ್ಧ ಸುರಪುರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ.

ಅನ್ನಭಾಗ್ಯ ಯೋಜನೆಯ ಅಕ್ಕಿ ಸಾರ್ವಜನಿಕರಿಗೆ ವಿತರಿಸುವ ಉದ್ದೇಶ ಹೊಂದಿರುವ ಹಿನ್ನೆಲೆಯಲ್ಲಿ, ಅದರ ಅಕ್ರಮ ಸಾಗಾಟ ಮತ್ತು ಮಾರಾಟದ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.