Home ಜಿಲ್ಲೆ ದಾಖಲೆ, ಪುರಾವೆ ಇಲ್ಲದೆ ಪ್ರಿಯಾಂಕ್ ಖರ್ಗೆ ವಿರುದ್ಧ ಆರೋಪ ಸರಿಯಲ್ಲ: ಭೀಮಣ್ಣ ಮೇಟಿ

ದಾಖಲೆ, ಪುರಾವೆ ಇಲ್ಲದೆ ಪ್ರಿಯಾಂಕ್ ಖರ್ಗೆ ವಿರುದ್ಧ ಆರೋಪ ಸರಿಯಲ್ಲ: ಭೀಮಣ್ಣ ಮೇಟಿ

ಯಾದಗಿರಿ: ಕೆಪಿಎಸ್‌ಸಿ ನೇಮಕಾತಿ ಅಕ್ರಮದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಪಾತ್ರವಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದೇ ದಾಖಲೆ ಹಾಗೂ ಪುರಾವೆಗಳಿಲ್ಲದೆ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ. ಭೀಮಣ್ಣ ಮೇಟಿ ಹೇಳಿದರು.

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಆರೋಪ ಮಾಡುವಾಗ ಸೂಕ್ತ ದಾಖಲೆ ಹಾಗೂ ಪುರಾವೆಗಳನ್ನು ಇಟ್ಟುಕೊಂಡು ಮಾತನಾಡಬೇಕು. ಆಧಾರವಿಲ್ಲದೆ ಸಚಿವರ ವಿರುದ್ಧ ನಿರಂತರವಾಗಿ ಆರೋಪ ಮಾಡುತ್ತಿರುವುದು ರಾಜಕೀಯ ಉದ್ದೇಶದಿಂದ ಕೂಡಿದೆ ಎಂದು ದೂರಿದರು.

ಕೆಪಿಎಸ್‌ಸಿ ಪರೀಕ್ಷೆ ನಡೆಸುವುದು, ಅಭ್ಯರ್ಥಿಗಳ ಆಯ್ಕೆ ಪಟ್ಟಿ ಪ್ರಕಟಿಸುವುದು ಹಾಗೂ ಅಂತಿಮ ಪಟ್ಟಿಯನ್ನು ಸಂಬAಧಪಟ್ಟ ಇಲಾಖೆಗೆ ಕಳುಹಿಸುವುದು ಸೇರಿದಂತೆ ನೇಮಕಾತಿ ಪ್ರಕ್ರಿಯೆಯ ವಿವಿಧ ಹಂತಗಳಿಗೆ ನಿರ್ದಿಷ್ಟ ಸಂಸ್ಥೆಗಳು ಹಾಗೂ ಅಧಿಕಾರಿಗಳು ಜವಾಬ್ದಾರರಾಗಿದ್ದಾರೆ. ಹೀಗಿರುವಾಗ ಕೆಪಿಎಸ್‌ಸಿಯಲ್ಲಿ ನಡೆದಿದೆ ಎನ್ನಲಾಗುತ್ತಿರುವ ಅಕ್ರಮಕ್ಕೆ ನೇರವಾಗಿ ಸಚಿವರನ್ನು ಹೊಣೆಗಾರರನ್ನಾಗಿ ಮಾಡುವ ಪ್ರಯತ್ನ ಏಕೆ ನಡೆಯುತ್ತಿದೆ ಎಂದು ಪ್ರಶ್ನಿಸಿದರು.

ಅಕ್ರಮ ನಡೆದಿದ್ದರೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಿ. ಆದರೆ ಯಾವುದೇ ದಾಖಲೆಗಳಿಲ್ಲದೆ ಸಚಿವರ ವಿರುದ್ಧ ಆರೋಪ ಮಾಡುವುದು ಸರಿಯಲ್ಲ ಎಂದು ಭೀಮಣ್ಣ ಮೇಟಿ ಹೇಳಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್‌ನ ಹಿರಿಯ ಮುಖಂಡ ಸುದರ್ಶನ ನಾಯಕ, ಮರಿಗೌಡ ಮರಕಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.