
ಸೇಡಂ,ಮೇ,01: ರಾಜ್ಯದಲ್ಲಿರುವ ಪ್ರಸ್ತುತ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಜನರು ಬೇಸತ್ತಿದ್ದಾರೆ. ಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಎನ್‍ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದ್ದು ಯುವ ಜೆಡಿಎಸ್ ಪಕ್ಷದ ಕಾರ್ಯಕರ್ತರು ಸಂಘಟಿತರಾಗಿ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ಕುಮಾರಸ್ವಾಮಿ ಹೇಳಿದರು.
ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ ಜನರೊಂದಿಗೆ ಜನತಾದಳ ಹಾಗೂ ಜೆಡಿಎಸ್ ಪಕ್ಷದ 25ನೇ ವರ್ಷದ ರಜತ ಮಹೋತ್ಸವದ ಅಂಗವಾಗಿ ಬೃಹತ ಸಮಾವೇಶದಲ್ಲಿ ಬಾಲರಾಜ್ ಬ್ರಿಗೇಡ್ ವತಿಯಿಂದ ಸೇಡಂನಲ್ಲಿ ಉಚಿತ ಆಂಬುಲೆನ್ಸ್ ಸೇವೆ ಮರುಚಾಲನೆ ಹಾಗೂ ಜನರೊಂದಿಗೆ ಜನತಾದಳ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ರಾಜ್ಯದಲ್ಲಿ ಮತ್ತೆ ಶಿಕ್ಷಣ ಕ್ಷೇತ್ರದಲ್ಲಿ ಹಿಂದೆ ಉಳಿದ ಕಲ್ಬುರ್ಗಿ ಜಿಲ್ಲೆ ರಾಜ್ಯದಲ್ಲಿ ಎಸೆಸೆಲ್ಸಿಯಲ್ಲಿ ಕೊನೆಯ ಸ್ಥಾನ ಪಡೆದಿದ್ದು
ಇಲ್ಲಿನ ರಾಜಕೀಯ ನಾಯಕರಗಳ ಮನೋಭಾವ ರಾಜ್ಯಕ್ಕೆ ತಿಳಿಯುವಂತಾಗಿದೆ, ಸಿಮೆಂಟ್ ನಗರಿ ಎಂದು ಪ್ರಖ್ಯಾತಿ ಪಡೆದ ಸೇಡಂ ತಾಲೂಕಿಗೆ ಇಲ್ಲಿನ ರೈತರು ಭೂಮಿ, ನೀರು ಕರೆಂಟು ನೀಡಿದರು ಉದ್ಯೋಗ ನೀಡುವಲ್ಲಿ ವಿಫಲವಾಗಿದೆ , ನಾಲ್ಕು ಬಾರಿ ಶಾಸಕರಾಗಿ ಎರಡು ಬಾರಿ ವೈದ್ಯಕೀಯ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ಶರಣಪ್ರಕಾಶ ಪಾಟೀಲ್ ಅವರು ತುರ್ತು ಚಿಕಿತ್ಸಾ ಘಟಕ ಆರಂಭಿಸದೆ ಇರುವುದು ಬೇಸರ ಸಂಗತಿ ಎಂದರು.ಮಾಜಿ ಸಚಿವ ಬಂಡೆಪ್ಪ ಕಾಶಂಪುರ್, ಜೆಡಿಎಸ್ ಪಕ್ಷದ ಕೋರ್ ಕಮಿಟಿಯ ರಾಜ್ಯಾಧ್ಯಕ್ಷರಾದ ಕೃಷ್ಣಾರೆಡ್ಡಿ ಹಾಗೂ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಬಾಲರಾಜ ಗುತ್ತೇದಾರ್ ಪ್ರಾಸ್ತಾವಿಕ ಮಾತನಾಡಿದರು. ಈ ವೇಳೆಯಲ್ಲಿ ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ದೊಡ್ಡಪ್ಪಗೌಡ ನರಗೋಳ,ಮಾಜಿ ಶಾಸಕ ವೆಂಕಟಪ್ಪ ನಾಯಕ್, ನಾಸಿರ್ ಹುಸೇನ್, ಕೃಷ್ಣಾರೆಡ್ಡಿ ಕಲಬುರ್ಗಿ, ಶಿವಕುಮಾರ್ ನಾಟಿಕರ್ ಅಫ್ಜಲ್ಪುರ್, ಮಹೇಶ್ವರಿ ವಾಲಿ ಆಳಂದ್, ಜೆಡಿಎಸ್‍ನ ತಾಲೂಕು ಅಧ್ಯಕ್ಷ ವೆಂಕಟರೆಡ್ಡಿ ಪಾಟೀಲ್ ಗಡ್ಡನ್, ಜಗನ್ನಾಥ್ ರೆಡ್ಡಿ ಗೋಟುರ್, ಶಿವಪುತ್ರಪ್ಪ ಮೋಘಾ, ಶಂಭುಲಿಂಗ ನಾಟಿಕರ್, ಗೋವರ್ಧನ್ ರೆಡ್ಡಿ ಮೋತಕಪಲ್ಲಿ, ಚಾಂದ್ ಪಾಷಾ, ಗೀತಾ, ಸೇರಿದಂತೆ ಅನೇಕ ರಾಜ್ಯ ನಾಯಕರು ಹಾಗೂ ತಾಲೂಕಿನ ಜೆಡಿಎಸ್ ಕಾರ್ಯಕರ್ತರು ಇದ್ದರು.
ಬಾಕ್ಸ್: ರಾಷ್ಟ್ರೀಯ ಪಕ್ಷಗಳಿಗೆ ಸವಾಲ್ ನೀಡುವಂತ ನಮ್ಮ ಜೆಡಿಎಸ್ ಪಕ್ಷಕ್ಕೆ ಇದೆ ,ನಮ್ಮ ಪಕ್ಷದಲ್ಲಿಯೂ ಪ್ರಧಾನಿಗಳು, ಮುಖ್ಯಮಂತ್ರಿಗಳು ಆಗಿರುವಂತಹ ದೊಡ್ಡ ಪಕ್ಷವೇ ಆಗಿದೆ, ಜೆಡಿಎಸ್ ಪಕ್ಷವು ರಾಜ್ಯದಲ್ಲಿ ಕರ್ನಾಟಕದಲ್ಲಿ ಗಟ್ಟಿ ನೆಲೆ ನಿಂತಿದೆ, ಕಾರ್ಯಕರ್ತರು ಸಂಘಟಿತರಾಗಿ ಪಕ್ಷದ ಅಧಿಕಾರ ಬರುವ ಪ್ರಯತ್ನ ನಾವು ಮಾಡೋಣ.
ಬಂಡೆಪ್ಪ ಕಾಶಂಪುರ್ ಮಾಜಿ ಸಚಿವರು
ಪ್ರತಿ ಗ್ರಾಮಕ್ಕೆ ಭೇಟಿ ನೀಡಿ ಪಕ್ಷ ಸಂಘಟಿಸುವ ಪ್ರಯತ್ನ ನಿಲ್ಲಿಸುವುದಿಲ್ಲ ಮತ್ತೆ ನವೆಂಬರ್ ಡಿಸೆಂಬರ್ ತಿಂಗಳಲ್ಲಿ ದೊಡ್ಡ ಪ್ರಮಾಣದ ಕಾರ್ಯಕ್ರಮ ಆಯೋಜನೆ ಮಾಡುವ ಮುಖಾಂತರ ಸೇಡಂ ತಾಲೂಕಿನ ಜೆಡಿಎಸ್ ಪಕ್ಷದ ಕಾರ್ಯಕರ್ತರ ಶಕ್ತಿ ರಾಜ್ಯಮಟ್ಟದಲ್ಲಿ ಗುರುತಿಸುವ ಪ್ರಯತ್ನ ಮಾಡಲಾಗುವುದು.
ಬಾಲರಾಜ್ ಗುತ್ತೇದಾರ್ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷರು ಕಲಬುರ್ಗಿ
ರಾಜ್ಯ ಸರ್ಕಾರದ 36 ತಿಂಗಳಲ್ಲಿ ಗೃಹಲಕ್ಷ್ಮಿ ಯೋಜನೆ ಅಡಿ ಮಹಿಳೆಯರಿಗೆ ಬರುವ 10 ತಿಂಗಳ 2000 ಸಾವಿರ ರೂಪಾಯಿ ರಾಜ್ಯ ಸರ್ಕಾರ ಇಟ್ಟುಕೊಂಡಿದ್ದು ರಾಜ್ಯ ಸರ್ಕಾರ ತಕ್ಷಣ ಬಿಡುಗಡೆಗೊಳಿಸಲಿ, ರಾಜ್ಯ ಸರ್ಕಾರ 5 ಗ್ಯಾರಂಟಿ ಹೆಸರಿನಲ್ಲಿ ಜನರಿಂದ ಮತ ಪಡೆದು ಜನರಿಗೆ ವಂಚನೆ ಮಾಡುತ್ತಿದೆ.
ಕೃಷ್ಣಾರೆಡ್ಡಿ ಜೆಡಿಎಸ್ ಪಕ್ಷದ ರಾಜ್ಯ ಕೋರ್ ಕಮಿಟಿ ಅಧ್ಯಕ್ಷರು





















