
ಜೇವರಗಿ,ಮೇ 15: ಡಾ.ಅಂಬೇಡ್ಕರ್ ಜಯಂತಿಯ ಅಂಗವಾಗಿ ಪಟ್ಟಣದ ಅಂಬೇಡ್ಕರ್ ಭವನದ ಬಳಿ ಮೇ 15ರಿಂದ 17ರವರೆಗೆ ಡಾ.ಅಂಬೇಡ್ಕರ್ ಅರಿವು ಉತ್ಸವ-2026 ಹಮ್ಮಿಕೊಳ್ಳಲಾಗಿದೆ ಎಂದು ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ಪುಂಡಲೀಕ ಗಾಯಕವಾಡ ತಿಳಿಸಿದ್ದಾರೆ.
ಪಟ್ಟಣದ ಅಂಬೇಡ್ಕರ್ ಭವನದ ಬಳಿ ವೇದಿಕೆ ಪೂರ್ವಸಿದ್ಧತೆ ನಡೆಸಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 16ರಂದು ನಡೆಯುವ ಕಾರ್ಯಕ್ರಮದ ಸಾನ್ನಿಧ್ಯವನ್ನು ಸೊನ್ನದ ಶಿವಾನಂದ ಸ್ವಾಮೀಜಿ, ಯಡ್ರಾಮಿ ಸಿದ್ದಲಿಂಗ ಸ್ವಾಮೀಜಿ, ಚಿಗರಳ್ಳಿ ಸಿದ್ದಬಸವ ಕಬೀರಾನಂದ ಸ್ವಾಮೀಜಿ ವಹಿಸುವರು. ಸರ್ಕಾರಿ ಪದವಿ ಕಾಲೇಜಿನ ಶಾಂತಾ ಅಷ್ಟಗಿ, ಚಂದ್ರಶೇಖರ ಕಟ್ಟಿಮನಿ ಮುಖ್ಯ ಭಾಷಣ ಮಾಡಲಿದ್ದಾರೆ ಎಂದು ಹೇಳಿದರು.
17ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಮೆರವಣಿಗೆಗೆ ಪಿಎಸ್‍ಐ ಗಜಾನಂದ ಬಿರಾದಾರ ಚಾಲನೆ ನೀಡುವರು. ಸಂಜೆ ನಡೆಯಲಿರುವ ಕಾರ್ಯಕ್ರಮವನ್ನು ಸಚಿವ ಡಾ.ಎಚ್. ಸಿ.ಮಹಾದೇವಪ್ಪ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕಖರ್ಗೆ ಜ್ಯೋತಿ ಬೆಳಗಿಸುವರು. ರಾಜರತ್ನ ಅಂಬೇಡ್ಕರ್ ಮುಖ್ಯ ಭಾಷಣ ಮಾಡಲಿದ್ದಾರೆ. ಜ್ಞಾನ ಪ್ರಕಾಶ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಕೆಕೆಆರ್‍ಡಿಬಿ ಅಧ್ಯಕ್ಷ ಡಾ.ಅಜಯಸಿಂಗ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ವಿವರಿಸಿದರು.
ಸಮಿತಿ ಗೌರವಾಧ್ಯಕ್ಷ ಶಾಂತಪ್ಪ ಯಲಗೋಡ, ಸುಭಾಷ ಚನ್ನೂರ, ಭೀಮರಾಯ ನಗನೂರ, ಮಲ್ಲಣ್ಣ ಕೊಡಚಿ, ರಾಯಪ್ಪ ಬಾರಿಗಿಡ, ಬೆಣ್ಣೆಪ್ಪ ಕೊಂಬಿನ್, ರಾಜಶೇಖರ ಶಿಲ್ಪಿ, ಶ್ರೀಹರಿ ಕರಕಿಹಳ್ಳಿ, ಸಿದ್ರಾಮ ಕಟ್ಟಿ, ಪ್ರಭಾಕರ ಸಾಗರ, ಸಂಗಣ್ಣ ಕಟ್ಟಿಸಂಗಾವಿ ಸೇರಿದಂತೆ ಹಲವಾರು ಜನ ಇದ್ದರು.























