
ಕಲಬುರಗಿ,ಡಿ.6:ಜಿಲ್ಲಾಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಇಂದು ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ ಡಾ. ಬಿ.ಆರ್. ಅಂಬೇಡ್ಕರ್ ಅವರ 69ನೇ ಮಹಾಪರಿನಿರ್ವಾಣ ದಿನವನ್ನು ನಗರದ ಜಗತ್ ವೃತ್ತದಲ್ಲಿ ಭಾವಪೂರ್ಣವಾಗಿ ಆಚರಿಸಲಾಯಿತು.
ಪೂಜ್ಯ ಭಂತೆÀ ವರಜ್ಯೋತಿ ಅಣದೂರ ಬೀದರ್,ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ,ಶಾಸಕರಾದ ತಿಪ್ಪಣ್ಣಪ್ಪ ಕಮಕನೂರ, ಬಸವರಾಜ ಮತ್ತಿಮೂಡ,ಕೆಕೆಆರ್‍ಟಿಸಿ ಅಧ್ಯಕ್ಷÀ ಅರುಣಕುಮಾರ ಪಾಟೀಲ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ,ಕುಡಾ ಅಧ್ಯಕ್ಷ ಮಜರ್ ಆಲಂ ಖಾನ್, ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್, ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ಪೆÇಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ದೊಡಮನಿ, ಎಸ್‍ಸಿ.ಎಸ್‍ಟಿ ನೌಕರರ ಸಂಘದ ಅಧ್ಯಕ್ಷ ಮಹೇಶ್ ಹುಬಳ್ಳಿ ,ಪ್ರಕಾಶ ಹದಿನೂರು, ವಿಠ್ಠಲ್ ಎಸ್. ಗೋಳ ಸೇರಿದಂತೆ ಹಲವಾರು ಗಣ್ಯರು ಮಾಲಾರ್ಪಣೆ ಮತ್ತು ಗೌರವ ಸರ್ಪಣೆ ಸಲ್ಲಿಸಿದರು.ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು, ಸಮಾಜದ ಮುಖಂಡರು, ಸೇರಿದಂತೆ ಹಲವು ಗಣ್ಯರು ಭಾಗವಹಿಸಿದರು.
ಇದೇ ಸಂದರ್ಭದಲ್ಲಿ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್ ಅವರು, ತ್ರಿವರ್ಣ ಧ್ವಜವನ್ನು ಮತ್ತು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಹಾಗೂ ನಗರ ಪೆÇೀಲಿಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರು ನೀಲಿ ಧ್ವಜಾರೋಹಣ ನೆರವೇರಿಸಿದರು.































