ಜಕ್ಕೂರಿನಲ್ಲಿ ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ

ಬೆಂಗಳೂರು.ಡಿ೧೦: ಬ್ಯಾಟರಾಯನಪುರ ಕ್ಷೇತ್ರವ್ಯಾಪ್ತಿಯ ಜಕ್ಕೂರಿನ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ಟ್ರಸ್ಟ್ ವತಿಯಿಂದ ಅಂಬೇಡ್ಕರ್ ರವರ ೬೯ನೇ ಮಹಾ ಪರಿನಿರ್ವಾಣ ದಿನಾಚಣೆಯನ್ನು ಆಚರಿಸಲಾಯಿತು.

ಅಂಬೇಡ್ಕರ್‌ರವರ ಪ್ರತಿಮೆಗೆ ಪೂಜೆ ನೆರವೇರಿಸಿದ ಟ್ರಸ್ಟ್‌ನ ಸದಸ್ಯರು ಹಾಗೂ ಅಭಿಮಾನಿಗಳು ಪುಷ್ಟನಮನ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರವಿಕುಮಾರ್, ಅಂಬೇಡ್ಕರ್‌ರವರು ಅಸ್ಪೃಶ್ಯತೆಯ ವಿರುದ್ಧ ಮತ್ತು ದಲಿತರ ಹಕ್ಕುಗಳಿಗಾಗಿ ಹೋರಾಟ ನಡೆಸುವ ಮೂ ಲಕ ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದರು. ಮಹಿಳೆಯರು ಮತ್ತು ಕಾರ್ಮಿಕರ ಹಕ್ಕುಗಳನ್ನು ಪ್ರತಿಪಾದಿಸಿದ ಅವರು, ಭಾರತಕ್ಕೆ ಸಮಗ್ರ ಮತ್ತು ಪ್ರಗತಿಪರ ಸಂವಿಧಾನವನ್ನು ನೀಡುವಲ್ಲಿ ಪ್ರಮುಖಪಾತ್ರ ವಹಿಸಿದರು. ಆ ಮೂಲಕ ಅವರು ದೇಶಕ್ಕೆ ನೀಡಿದ ಕೊಡುಗೆಗಳು ಇಂದಿಗೂ ದಾರಿದೀಪವಾಗಿವೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಜಕ್ಕೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಿಸಲಾಯಿತು. ನಿವೃತ್ತ ಪ್ರಾಂಶುಪಾಲ ಆನಂದಮೂರ್ತಿ ಅವರನ್ನು ಸನ್ಮಾ ನಿಸಲಾಯಿತು.ಯಲಹಂಕ ತಾಲ್ಲೂಕು ವಿಶೇಷ ತಹಶೀಲ್ದಾರ್ ಮುನಿಸ್ವಾಮಿರೆಡ್ಡಿ, ಆರಕ್ಷಕ ಉಪನಿರೀಕ್ಷಕ ಪ್ರವೀಣ್, ಗ್ಯಾರಂಟಿ ಯೋಜನೆಗಳ ಬ್ಯಾಟರಾಯನಪುರ ಕ್ಷೇತ್ರದ ಅಧ್ಯಕ್ಷ ಎಚ್.ಎ.ಶಿವಕು ಮಾರ್, ಟ್ರಸ್ಟ್‌ನ ಸದಸ್ಯರಾದ ಎಸ್.ಮಾರುತಿ, ಆಂಜಿನಪ್ಪ, ಕೃಷ್ಣಪ್ಪ, ರತ್ನಮ್ಮ, ಸುಮಿತ್ರಮ್ಮ ಮತ್ತಿತರರು ಉಪಸ್ಥಿತರಿದ್ದರು.