Home ಜಿಲ್ಲೆ ಬೆಂಗಳೂರು ಸಾಧಕರಿಗೆ ಅಂಬೇಡ್ಕರ್ ರತ್ನ ಪ್ರಶಸ್ತಿ ಪ್ರದಾನ ಇಂದು

ಸಾಧಕರಿಗೆ ಅಂಬೇಡ್ಕರ್ ರತ್ನ ಪ್ರಶಸ್ತಿ ಪ್ರದಾನ ಇಂದು

ಬೆಂಗಳೂರು,ಏ.೧೫-ಜಿಬಿಎ ಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಇಂದು ಸಂಜೆ ನಗರದ ಪುರಭವನ (ಟೌನ್‌ಹಾಲ್) ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ದಿನಾಚರಣೆ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕ, ಸಾಧಕಿಯರಿಗೆ ಅಂಬೇಡ್ಕರ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.


ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಡಾ. ಬಿ.ಆರ್. ಅಂಬೇಡ್ಕರ್ ರತ್ನ ಪ್ರಶಸ್ತಿ ಹಾಗೂ ಜಿಬಿಎ ನೌಕರರಿಗೆ ಡಾ. ಬಿ.ಆರ್. ಅಂಬೇಡ್ಕರ್ ಭೂಷಣ ಪ್ರಶಸ್ತಿಯನ್ನು ನೀಡಲಾಗುತ್ತದೆ ಎಂದು ಸಂಘದ ಅಧ್ಯಕ್ಷ ಅಮೃತ್‌ರಾಜ್ ತಿಳಿಸಿದ್ದಾರೆ.


ಈ ಸಮಾರಂಭಕ್ಕೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಜಿ. ವೀರಪ್ಪ, ಹೈಕೋರ್ಟ್ ನ್ಯಾಯಮೂರ್ತಿಗಳಾದ ಹೆಚ್.ಬಿ. ನರೇಂದ್ರ ಪ್ರಸಾದ್ ಮತ್ತು ರಾಚಯ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಇದಲ್ಲದೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್, ನಿಕಟ ಪೂರ್ವ ಆಯುಕ್ತ ಅನಿಲ್ ಕುಮಾರ್, ವಿಶೇಷ ಆಯುಕ್ತ ವೆಂಕಟಾಚಲಪತಿ, ಹಿರಿಯ ವಕೀಲ ಎ. ರಾಜೇಶ್ ಹಾಗೂ ಚಿಂತಕ ಪ್ರೊ. ಎಂ. ಶ್ರೀನಿವಾಸ ಮೂರ್ತಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿರಲಿದ್ದಾರೆ.


ಜಿಬಿಎ ವ್ಯಾಪ್ತಿಯ ವಿವಿಧ ಪಾಲಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅಮೃತ್‌ರಾಜ್ ಮನವಿ ಮಾಡಿದ್ದಾರೆ.