Home ಕ್ರೈಂ ಸುದ್ದಿಗಳು ಜಾತ್ರೆ ಗದ್ದಲದ ನಡುವೆ ಗಲಾಟೆ; ಪರಸ್ಪರ ಬಡಿದಾಟ

ಜಾತ್ರೆ ಗದ್ದಲದ ನಡುವೆ ಗಲಾಟೆ; ಪರಸ್ಪರ ಬಡಿದಾಟ

ಯಾದಗಿರಿ: ಜಾತ್ರೆಯ ಗದ್ದಲದ ನಡುವೆ ಹುಡುಗಿಯ ಸೊಂಟ ಹಿಂಡಿದನೆಂಬ ಆರೋಪದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಜಿಲ್ಲೆಯ ವಡಿಗೇರಾ ತಾಲೂಕಿನ ಹಯ್ಯಾಳ (ಬಿ) ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಲಿಂಗೇಶ್ವರ ದೇವಸ್ಥಾನದ ಐತಿಹಾಸಿಕ ಜಾತ್ರೆಯ ವೇಳೆ ಯುವಕನೊಬ್ಬ ಹುಡುಗಿಯ ಸೊಂಟ ಹಿಂಡಿದನೆನ್ನಲಾಗಿದ್ದು, ಇದರಿಂದ ಆಕ್ರೋಶಗೊಂಡ ಹುಡುಗಿ ಕಡೆಯವರು ಯುವಕನನ್ನು ಥಳಿಸಿದ್ದಾರೆ ಎನ್ನಲಾಗಿದೆ. ಬಳಿಕ ಎರಡೂ ಕಡೆಯವರು ಪರಸ್ಪರ ಬಡಿದಾಡಿಕೊಂಡಿದ್ದಾರೆ.

ಜಾತ್ರೆಯ ಸಂದರ್ಭದಲ್ಲಿ ದೇವಸ್ಥಾನದ ಮುಂಭಾಗದಲ್ಲೇ ಗಲಾಟೆ ನಡೆದಿದ್ದು, ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಶಹಾಪುರ ಪೆÇಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೆÇಲೀಸರು ಪ್ರಕರಣದ ಕುರಿತು ತನಿಖೆ ಕೈಗೊಂಡಿದ್ದಾರೆ. ಘಟನೆ ಶಹಾಪುರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.