Home ಜಿಲ್ಲೆ ಕಲಬುರಗಿ ವೋಟ್ ಬಚಾವೊ ದೇಶ ಬಚಾವೊ ಹೋರಾಟ ಯಶಸ್ವಿಗೊಳಿಸಲು ಮನವಿ

ವೋಟ್ ಬಚಾವೊ ದೇಶ ಬಚಾವೊ ಹೋರಾಟ ಯಶಸ್ವಿಗೊಳಿಸಲು ಮನವಿ

ಕಲಬುರಗಿ: ಅಖಿಲ ಭಾರತ ಕಾಂಗ್ರೆಸ್ ಪಕ್ಷದಿಂದ ನ.೧ ರಂದು ನವದೆಹಲಿಯ ರಾಮಲೀಲಾ ಮೈದಾನದಲ್ಲಿ ಆಯೋಜಿಸಿರುವ ವೋಟ್ ಬಚಾವೊ ದೇಶ ಬಚಾವೊ ಪ್ರಜಾಪ್ರಭುತ್ವ ಉಳಿಸುವ ಹೋರಾಟದಲ್ಲಿ ಜಿಲ್ಲೆಯ ಕಾಯಕರ್ತರು ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕೆಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ಗುರಮಿಠಕಲ್ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾದ ರಾಜಗೋಪಾಲರೆಡ್ಡಿ ಮುದಿರಾಜ ಅವರು ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು,ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ಗಾಂಧಿ, ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಡಿಸಿಎಂ ಡಾ.ಜಿ. ಪರಮೇಶ್ವರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಯು.ಟಿ. ಖಾದರ. ಜಮೀರ್ ಅಹ್ಮದಖಾನ್, ಪ್ರಿಯಾಂಕ್ ಖರ್ಗೆ, ರಿಜ್ವಾನ್ ಅರ್ಷದ್, ಮಾಜಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಈ ಹೋರಾಟದಲ್ಲಿ ಭಾಗಿಯಾಗಲಿದ್ದು, ಈ ಹೋರಾಟದಲ್ಲಿ ಕಾಂಗ್ರೆಸ್ ಮುಖಂಡರು,ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿಕೊಂಡರು.