ಅನೀಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ ಕಾರ್ಯಕ್ರಮ


ಗದಗ, ಜು.೬: ಗದಗ ಜಿಲ್ಲೆಯ ರಾಷ್ಟಿçÃಯ ಆರೋಗ್ಯ ಅಭಿಯಾನದ ಅನೀಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಸರಕಾರಿ ಫ್ರೌಡ ಶಾಲೆ ಶಿದ್ದಲಿಂಗ ನಗರ ಗದಗದಲ್ಲಿ ಜರುಗಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಗುರುಮಾತೆಯರಾದ ಶ್ರೀಮತಿ ಜೆ. ಬಿ ಅಣ್ಣಿಗೇರಿಯವರು ವಹಿಸಿದ್ದರು. ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಶ್ರೀಮತಿ ಡಾ. ಮೀನಾಕ್ಷಿ ಕೆ.ಎಸ್ ಕಾರ್ಯಕ್ರಮ ಉದ್ಘಾಟಿಸಿದರು. ಸದರಿ ಕಾರ್ಯಕ್ರಮದಲ್ಲಿ ಆರ್ ಬಿ ಎಸ್ ಕೆ ವೈದ್ಯಾಧಿಕಾರಿಗಳಾದ ಡಾ.ಜಯಕುಮಾರ ಬ್ಯಾಳಿ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದಾಧಿಕಾರಿಗಳಾದ ಡಾ. ಮಹೇಶ ಕೊಪ್ಪಳ, ಡಾ, ಸುಧಾ ಕಳಸದ, ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಶಾಲಾ ಸಹ ಶಿಕ್ಷಕರು ಭಾಗವಹಿಸಿದ್ದರು.