ಲಕ್ಷೆö್ಮÃಶ್ವರ,ನ.೪: ರಾಜ್ಯಾದ್ಯಂತ ವಾಲ್ಮೀಕಿ ಜಯಂತಿ ಆಚರಿಸಲ್ಪಡುತ್ತಿದ್ದು, ಜಯಂತಿ ಆಚರಣೆ ನೆಪಮಾತ್ರಕ್ಕೆ ಆಗುವದು ಬೇಡ, ಅದು ವರ್ಷದಿಂದ ವರ್ಷಕ್ಕೆ ಸಮಾಜದ ಬಾಂಧವರ ಪರಿವರ್ತನೆ ಹಾದಿಯಲ್ಲಿ ಸಾಗುವಂತಾಗಬೇಕು, ಬದಲಾವಣೆ ಜೊತೆ ಬೆಳೆಯುತ್ತಾ ಹೋಗಬೇಕು ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಅಭಿಪ್ರಾಯಪಟ್ಟರು.
ಅವರು ಲಕ್ಷೆö್ಮÃಶ್ವರ ತಾಲ್ಲೂಕು ಮಹರ್ಷಿ ವಾಲ್ಮೀಕಿ ನಾಯಕ ವಿವಿದೋದ್ಧೇಶಗಳ ಸಂಘದ ವತಿಯಿಂದ ಪಟ್ಟಣದ ತೇರಿನ ಮನೆ ಆವರಣದಲ್ಲಿ ಜರುಗಿದ ಮಹರ್ಷಿ ವಾಲ್ಮೀಕಿ ಹಾಗೂ ವೀರ ಮದಕರಿ ನಾಯಕ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸದ್ಯ ರಾಜ್ಯ ಸರ್ಕಾರ ಸಮುದಾಯ ಉಳಿಸುವ ಕೆಲಸ ಮಾಡುತ್ತಿಲ್ಲ. ಸಿದ್ಧರಾಮಯ್ಯನವರ ಸರ್ಕಾರ ೧೮೭ ಕೋಟಿ ರೂಪಾಯಿ ವಾಲ್ಮೀಕಿ ನಿಗಮದ ಹಣವನ್ನು ನುಂಗಿ ನೀರು ಕುಡಿದಿದೆ. ಕೇವಲ ನೆಪಕ್ಕೆ ಮಾತ್ರ ಹಿಂದುಳಿದ ಮುಖ್ಯಮಂತ್ರಿ ವಿಷಯವನ್ನು ಮುನ್ನೆಲೆಗೆ ತಂದಿದ್ದಾರೆ. ಅವರಿಗೆ ಹಿಂದುಳಿದ ನಾಯಕರನ್ನೇ ಮುಖ್ಯಮಂತ್ರಿ ಮಾಡುವ ಉದ್ಧೇಶ ಇದ್ದರೆ ಸತೀಶ ಜಾರಕಿಹೊಳಿ ಅವರನ್ನು ಆಯ್ಕೆ ಮಾಡಲಿ ಎಂದು ಸವಾಲು ಹಾಕಿದರು.
ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ ಮಾತನಾಡಿ ನಮ್ಮ ಸಮಾಜದಲ್ಲಿ ಇನ್ನೂ ಬಾಲ್ಯ ವಿವಾಹ ನಡೆಯುತ್ತಿವೆ. ಇದಕ್ಕೆ ಶಿಕ್ಷಣದ ಕೊರತೆಯೇ ಪ್ರಮುಖ ಕಾರಣ. ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಉಪಯೋಗ ಆಗುತ್ತಿಲ್ಲ. ರಾಜ್ಯ ಸರ್ಕಾರ ಸತೀಶ ಜಾರಕಿಹೊಳಿ ಅವರನ್ನು ಮುಖ್ಯಮಂತ್ರಿ ಮಾಡಿದರೆ ನಮ್ಮ ಸಮಾಜಕ್ಕೆ ಖುಷಿ ಆಗುತ್ತದೆ ಎಂದು ತಿಳಿಸಿದರು.
ತಾಲ್ಲೂಕು ಮಹರ್ಷಿ ವಾಲ್ಮೀಕಿ ನಾಯಕ ವಿವಿದೋದ್ಧೇಶಗಳ ಸಂಘದ ಅಧ್ಯಕ್ಷ ಭೀಮಣ್ಣ ಯಂಗಾಡಿ ಅಧ್ಯಕ್ಷತೆ ವಹಿಸಿದ್ದರು.ಶಾಸಕ ಡಾ.ಚಂದ್ರು ಲಮಾಣಿ, ಮಾಜಿ ಶಾಸಕರಾದ ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ, ಆನಂದಸ್ವಾಮಿ ಗಡ್ಡದೇವರಮಠ ಮಾತನಾಡಿರು.
ಈ ಸಂದರ್ಭದಲ್ಲಿ ಸಣ್ಣವೀರಪ್ಪ ಹಳ್ಳೆಪ್ಪನವರ, ಪುರಸಭೆ ಅಧ್ಯಕ್ಷೆ ಯಲ್ಲವ್ವ ದುರ್ಗಣ್ಣವರ, ಸುನಿಲ ಮಹಾಂತಶೆಟ್ಟರ, ನಾಗರಾಜ ಮಡಿವಾಳರ, ಹನಮಂತ ಜಾಲಿಮರದ, ನಾಗರಾಜ ಕುಲಕರ್ಣಿ, ಫಕ್ಕೀರೇಶ ಮ್ಯಾಟಣ್ಣವರ, ರಾಜು ಓಲೇಕಾರ, ವಿಜಯ ಕರಡಿ, ಯಲ್ಲಪ್ಪ ತಳವಾರ, ಎನ್.ಎನ್.ನೆಗಳೂರ, ಮಂಜುನಾಥ ಮಾಗಡಿ, ಹೊನ್ನಪ್ಪ ವಡ್ಡರ, ಶಿವನಗೌಡ ನಾಯಕ್ ಮತ್ತಿತರರು ಇದ್ದರು. ಕೆ.ಎನ್. ಪ್ರಭುರಾಜ ಉಪನ್ಯಾಸ ನೀಡಿದರು. ಬಸವರಾಜ ಗಳಗನಾಥ, ದೊಡ್ಡಪ್ಪ ವಾಲ್ಮೀಕಿ ನಿರೂಪಿಸಿದರು.























