Home ಜಿಲ್ಲೆ ವಾರ್ಷಿಕೋತ್ಸವ ಕಾರ್ಯಕ್ರಮ

ವಾರ್ಷಿಕೋತ್ಸವ ಕಾರ್ಯಕ್ರಮ

ನವಲಗುಂದ,ಜು೨೬ : ತಾಲ್ಲೂಕಿನ ಮೊರಬ ಗ್ರಾಮದಲ್ಲಿನ ಓಂ ಶಾಂತಿ ಭವನದಲ್ಲಿ ಮೊರಬ ವಲಯದ ಸ್ಪೂರ್ತಿ ಜ್ಞಾನ ವಿಕಾಸ್ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ಜರುಗಿತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ನವಲಗುಂದ ಮಂಡಳ ಬಿಜೆಪಿ ಅಧ್ಯಕ್ಷ ಗಂಗಪ್ಪ ಮನಮಿ ಮಾತನಾಡಿ ಕುಟುಂಬದ ಆರೋಗ್ಯ ಕಾಪಾಡುವಲ್ಲಿ ಮಹಿಳೆಯರ ಪಾತ್ರ ಅಪಾರವಾಗಿದೆ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದರು.

ಬೃಹ್ಮಕುಮಾರಿ ಭಾವನಾ ಮಾತನಾಡಿ ಕುಟುಂಬದಲ್ಲಿ ಜ್ಞಾನ ಅಭಿವೃದ್ಧಿಯಾದರೆ ನಮ್ಮೆಲ್ಲರ ಸ್ಥಿತಿ ಇನ್ನೂ ಉತ್ತಮವಾಗಿರುತ್ತದೆ ಎಂದರು

ಒಕ್ಕೂಟದ ಸದಸ್ಯರಿಗೆ ವಿವಿಧ ರೀತಿಯ ಆಟೋಟ ಸ್ಪರ್ಧೆಗಳು ಹಾಗೂ ಸಾಂಸ್ಕöÈತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದು ಸದಸ್ಯರು ಆಸಕ್ತಿಯಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು

ತಾಲ್ಲೂಕು ಯೋಜನಾಧಿಕಾರಿ ದಿನೇಶ ಶರಿಗಾರ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನೂಡಲ್ ಅಧಿಕಾರಿ ವೆಂಕಟೇಶ ಹಾಗೂ ಜಿಲ್ಲಾ ಜನಜಾಗೃತಿ ಸದಸ್ಯರಾದ ಈಶ್ವರ ಜಾಲಿಹಾಳ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ರೇಖಾ, ಸೇವಾಪ್ರತಿನಿಧಿಯಾದ ಪ್ರಭಾ ಸೇರಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಪಾಲ್ಗೊಂಡಿದ್ದರು.