Home ಜಿಲ್ಲೆ ಕಲಬುರಗಿ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ವಾರ್ಷಿಕ ಸ್ನೇಹ ಸಮ್ಮೇಳನ ಉತ್ತಮ ವೇದಿಕೆ

ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ವಾರ್ಷಿಕ ಸ್ನೇಹ ಸಮ್ಮೇಳನ ಉತ್ತಮ ವೇದಿಕೆ

ಕರಜಗಿ :ಮಾ.15:ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಗುರುತಿಸಲು ಶಾಲಾ ವಾರ್ಷಿಕೋತ್ಸವಗಳು ಉತ್ತಮ ವೇದಿಕೆಯಾಗಿವೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಅರುಣಕುಮಾರ ಎಂ ವೈ ಪಾಟೀಲ ಹೇಳಿದರು
ಅವರು ಅಫಜಲಪುರ ತಾಲೂಕಿನ ಶಿವೂರ ಗ್ರಾಮದ ಪಿ ಎಂ ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಶಿಕ್ಷಕರು ಮಕ್ಕಳಿಗೆ ಗುಣಾತ್ಮಕ ಸಂಸ್ಕಾರದ ಪಠ್ಯದ ಜೊತೆಗೆ ಸ್ಪರ್ಧಾತ್ಮಕ ವಿಷಯಾಧಾರಿತ ಶಿಕ್ಷಣ ನೀಡಿದಾಗ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವನೆ ಮೂಡಲು ಸಾಧ್ಯವಾಗುತ್ತದೆ.ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಲು ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಸಹಕಾರಿಯಾಗಲಿವೆ.
ಶಿಕ್ಷಕರು ಮಕ್ಕಳಿಗೆ ಆಟದೊಂದಿಗೆ ಪಾಠ ಕಲಿಸುವ ಪ್ರವೃತ್ತಿ ಮೈಗೂಡಿಸಿಕೊಂಡು ಬೋಧಿಸಿದಾಗ ತಮಗೂ ಶಿಕ್ಷಣದ ಮಹತ್ವ ತಿಳಿಯುವುದರ ಜೊತೆಗೆ ಸರಳ ಬೋಧನೆಗೆ ಸಹಕಾರಿಯಾಗಲಿದೆ. ಪಾಲಕರು ಮಗುವಿನ ಸವಾರ್ಂಗೀಣ ಅಭಿವೃದ್ಧಿಗೆ ತಮ್ಮ ನಿತ್ಯ ಬದುಕಿನ ಕೆಲ ಸಮಯ ಮೀಸಲಿಡುವುದು ಅವಶ್ಯಕವಾಗಿದೆ ಎಂದು ಹೇಳಿದರು
ಈ ಸಂದರ್ಭದಲ್ಲಿ ಶಿವಬಸಯ್ಯ ಮಹಾಸ್ವಾಮಿಗಳು ವಿರಕ್ತ ಮಠ ಖೇಡಗಿ ಗಂಗಾಧರ ಶ್ರೀಗಳು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕಾಧ್ಯಕ್ಷ ಪ್ರಕಾಶ ಜಮಾದಾರ ಎಸ್ ಡಿ ಎಂ ಸಿ ಅಧ್ಯಕ್ಷ ಹಿರೇಮಠ ಶಂಕರಲಿಂಗ ಮುಖ್ಯ ಗುರು ಬಾಳಾಸಾಹೇಬ ಹಳಿಮನಿ ಸಂಜೀವ ಬಗಲಿ ಶಂಕರಲಿಂಗ ಗೌರಗೊಂಡ ಶಂಕರಲಿಂಗ ಉಡಚಣ ವೇಣುಮಾಧವ ಅವಧಾನಿ ಶ್ರೀಕಾಂತ ನಿವರಗಿ ನೀಲಪ್ಪ ಜಮಾದಾರ ಶ್ರೀಕಂಠಯ್ಯ ಮಠ ಶಿಕ್ಷಕ ಹಣಮೇಶ ಕೊಡೆಕಲ್ ಸೇರಿದಂತೆ ವಿದ್ಯಾರ್ಥಿಗಳಿದ್ದರು