ಸ್ನೇಹಿಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್ ಐಆರ್

ಬೆಂಗಳೂರು, ಫೆ.೨೩: ಮುಡಾ ಹಗರಣದ ದೂರುದಾರ,ಸಾಮಾಜಿಕ ಕಾರ್ಯಕರ್ತ ಸ್ನೇಹಿಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.


ಪವಿತ್ರ ಎನ್ನುವ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬೆದರಿಕೆ ಹಾಗೂ ಪ್ರೊ.

ಮೈಲಾರಪ್ಪ ವಿರುದ್ಧ ಕೊಟ್ಟಿರುವ ಕೇಸ್ ವಾಪಸ್ ಪಡೆದುಕೊಳ್ಳುವಂತೆ ಬೆದರಿಕೆ ಹಾಗೂ ಒತ್ತಡ ಹಾಕುತ್ತಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.


ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಸ್ನೇಹಮಯಿ ಕೃಷ್ಣ ಅವರನ್ನು ಎ೧ ಆರೋಪಿಯನ್ನಾಗಿ ಬಸವೇಶ್ವರ ನಗರ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಈಗಾಗಲೇ ಸ್ನೇಹಮಯಿ ಕೃಷ್ಣ,. ಮುಡಾ ಮಾಜಿ ಆಯುಕ್ತ ನಟೇಶ್ ನೀಡಿದ ದೂರಿನನ್ವಯ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣನನ್ನ ಬಂಧಿಸಲಾಗಿತ್ತು.


ಮುಂಬಡ್ತಿಗಾಗಿ ನಟೇಶ್, ಸಿಎಸ್ ಶಾಲಿನಿ ರಜನೀಶ್‌ಗೆ ಒಂದೂವರೆ ಕೋಟಿ ಲಂಚ ನೀಡಿದ್ದಾರೆಂದು ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದರು. ತಮ್ಮ ವಿರುದ್ಧದ ಆರೋಪ ನಿರಾಧಾರ ಎಂದು ಸಿಎಸ್ ಹೇಳಿದ್ದರು. ಈ ಸಂಬಂಧ ಪೊಲೀಸ್ ಆಯುಕ್ತರಿಗೆ ಮುಡಾ ಮಾಜಿ ಆಯುಕ್ತ ನಟೇಶ್ ದೂರು ನೀಡಿದ್ದರು.