ಕಾನೂನಿನ ಮೂಲಕ ಉತ್ತರ: ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಕಲಬುರಗಿ,ಅ.20-ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಫೇಕ್ ಪೋಸ್ಟ್‍ಗೆ ಕಾನೂನಿನ ಮೂಲಕ ಉತ್ತರ ನೀಡುವುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಟ್ವೀಟ್ ಮೂಲಕ ಎಚ್ಚರಿಕೆ ನೀಡಿದ್ದಾರೆ.
ಸತ್ಯಮಾರ್ಗದಲ್ಲಿ ಗೆಲ್ಲಲು ಸಾಧ್ಯವಾಗದಿದ್ದಾಗ ಸುಳ್ಳಿನ ಮಾರ್ಗದಲ್ಲಾದರೂ ಗೆಲ್ಲಬೇಕು ಎನ್ನುವುದು ಸಂಘನೀತಿ! ಸುಳ್ಳಿನ ಗೋಪುರ ಕಟ್ಟಿ ತಮ್ಮ ಕರಾಳ ಇತಿಹಾಸಕ್ಕೆ ಸಚ್ಚಾರಿತ್ರ್ಯದ ಬಣ್ಣ ಲೇಪಿಸಲು ಪ್ರಯತ್ನಿಸುವ ಸಂಘಪರಿವಾರವು ಮಲ್ಲಿಕಾರ್ಜುನ ಖರ್ಗೆಯವರ ಇತಿಹಾಸವನ್ನೂ ಕೆಡಿಸಲು ಮುಂದಾಗುವ ಮೂಲಕ ತಮ್ಮ ಹತಾಶೆಯನ್ನು ವ್ಯಕ್ತಪಡಿಸುತ್ತಿದ್ದಾರೆ.
ಸಂಘಪಾರಿವಾರ ಮೊದಲಿನಿಂದಲೂ ಇಂತಹ ಕುತಂತ್ರ, ಕುಕೃತ್ಯ, ಕುಯುಕ್ತಿಗಳನ್ನು ಮಾಡಿದ ಕುಖ್ಯಾತಿಯನ್ನು ಹೊಂದಿದೆ. ಈ ಕೃತ್ಯಕ್ಕೆ ಕಾನೂನಿನ ಮೂಲಕವೇ ಉತ್ತರ ನೀಡಲಾಗುವುದು ಎಂದು ಅವರು ಟ್ವೀಟ್‍ನಲ್ಲಿ ಎಚ್ಚರಿಕೆ ನೀಡಿದ್ದಾರೆ.