
ಕೋಲಾರ,ಮೇ,೨೨- ಭಯೋತ್ಪಾದನೆ ಯನ್ನು ವಿರೋಧಿಸುವ ಮೂಲಕ ನಮ್ಮ ರಾಷ್ಟ್ರದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡಬೆಕು. ಭಯೋತ್ಪಾದನೆ ನಿರ್ಮೂಲನೆ ಯುವ ಶಕ್ತಿಯ ಆದ್ಯ ಕರ್ತವ್ಯವಾಗಬೇಕು ಮತ್ತು ಪಿಡುಗನ್ನು ಬೇರು ಸಮೇತ ಕಿತ್ತೊಗೆಯಲು ಯುವಕರು ಕೈಜೋಡಿಸಬೇಕು ಎಂದು ಬೆಂಗಳೂರು ಉತ್ತರ ವಿವಿ ವಿತ್ತಾಧಿಕಾರಿ ವಸಂತಕುಮಾರ್ ಕರೆ ನೀಡಿದರು.
ವಿವಿಯ ಆವರಣದಲ್ಲಿ ಏರ್ಪಡಿಸಿದ್ದ ಭಯೋತ್ಪಾದನಾ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿ ಬೋಧಿಸಿ ಅವರು ಮಾತನಾಡುತ್ತಿದ್ದರು.
ಭಯೋತ್ಪಾದನೆ ನಿರ್ಮೂಲನೆಯಲ್ಲಿ ಎಲ್ಲರೂ ಭಾಗವಹಿಸಿ ಎಚ್ಚರದಿಂದ ಇರಬೇಕೆಂದ ಅವರು, ಇಂದು ಇಡೀ ವಿಶ್ವವನ್ನೇ ಕಾಡುತ್ತಿರುವ ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತೊಗೆಯುವ ಸಂಕಲ್ಪ ನಮ್ಮದಾಗಬೇಕು ಎಂದರು.
ಮಾನವೀಯ ಮೌಲ್ಯಗಳನ್ನು ಬೆಳೆಸುವುದರಿಂದ ಭಯೋತ್ಪಾದನೆ ನಿರ್ಮೂಲನೆ ಮಾಡಬಹುದೆಂದ ಅವರು, ಮನುಷ್ಯನ ಜೀವದ ಬೆಲೆ ಅರಿಯಬೇಕು, ಕೊಲೆ,ಹತ್ಯೆಗಳಂತಹ ಕೃತ್ಯಗಳಿಂದ ಸಮಾಜದಲ್ಲಿ ಶಾಂತಿ ನೆಲಸದು ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ವಿವಿಯ ಅಧಿಕಾರಿಗಳು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಜರಿದ್ದರು.





























