
ಕಲಬುರಗಿ,ಜು. 6: ನಗರದ ಎಪಿಎಂಸಿ ಆವರಣದಲ್ಲಿರುವ ಅನಧಿಕೃತ ವ್ಯಾಪಾರ ವಹಿವಾಟು ನಡೆಸುತ್ತಿರುವ ಅಂಗಡಿ ಗೋದಾಮುಗಳನ್ನು ತೆರವುಗೊಳಿಸಿ ತಪ್ಪಿತಸ್ಥರ ಪರವಾನಗಿ ರದ್ದುಪಡಿಸಲು ಹಿಂದೇಟು ಹಾಕುತ್ತಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಮತ್ತು ಎಪಿಎಂಸಿ ಸಚಿವ ಶಿವಾನಂದ ಪಾಟೀಲ ಅವರ ರಾಜೀನಾಮೆಗೆ ಆಗ್ರಹಿಸಿ ನಾಳೆ ( ಜು.7) ಕಲಬುರಗಿಯಿಂದ ವಿಜಯಪುರದ ಸಚಿವ ಶಿವಾನಂದ ಪಾಟೀಲ ಅವರ ಮನೆಯವರೆಗೂ ಪಾದಯಾತ್ರೆ ನಡೆಸಲಾಗುವದು ಎಂದು ದಲಿತ ಸೇನೆ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ ಹಾಗೂ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಎಂ ಎಸ್ ಪಾಟೀಲ ನರಿಬೋಳ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲಿಲಕ್ಷ್ಮೀಕಾಂತ ಸ್ವದಿ, ಗುರು ಮಾಳಗೆ,ಪೃಥ್ವಿರಾಜ ರಾಂಪೂರ ಇದ್ದರು