
ಸೇಡಂ,ಫೆ,04:ದೆಹಲಿಯಲ್ಲಿ ಕೇಂದ್ರ ಉಕ್ಕು ಹಾಗೂ ಭಾರಿ ಕೈಗಾರಿಕಾ ಮಂತ್ರಿಗಳು ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಎಚ್ ಡಿ ಕುಮಾರಸ್ವಾಮಿ ಅವರಿಗೆ ಸೇಡಂ ತಾಲೂಕಿನ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷರಾದ ಶಾಂತಕುಮಾರ ಚನ್ನಕ್ಕಿ ಸೇಡಂ ಅವರು ಸೇಡಂನಲ್ಲಿ ರೈತರ ಹೆಸರು ಖರೀದಿಯಲ್ಲಿ ಆದಂತಹ ಅನ್ಯಾಯ ಹಾಗೂ ತೊಗರಿಗೆ ಬೆಂಬಲ ಬೆಲೆಯನ್ನು 11.500 ರೂಪಾಯಿ ಹೆಚ್ಚಿಸುವಂತೆ ಕೇಂದ್ರ ಕೃಷಿ ಸಚಿವರ ಮೇಲೆ ಒತ್ತಡ ಹೇರುವಂತೆ ಮನವಿ ಪತ್ರವನ್ನು ಸಲ್ಲಿಸಿದರು.ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಶಿವಕುಮಾರ್ ಪಾಟೀಲ್ ತೇಲ್ಕೂರ್ ಹಾಗೂ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಬಾಲರಾಜ್ ಗುತ್ತೇದಾರ್ ಇದ್ದರು.





















